alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಪರ್ಧಿಸದ ಕಾರಣ ಬಹಿರಂಗಪಡಿಸಿದ ಅಂಬರೀಶ್

ಕೇಳದೇ ಇದ್ರೂ ಟಿಕೆಟ್ ಘೋಷಣೆ ಮಾಡಿ ಬಿ ಫಾರಂ ಕೊಡಲು ಮುಂದಾದ್ರೂ ನಟ ರೆಬಲ್ ಸ್ಟಾರ್ ಅಂಬರೀಶ್ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ನಿರಾಕರಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಶ್, ನಾನು ಎಂದಿಗೂ ಸ್ಟಾರ್. ಚಿತ್ರರಂಗ, ರಾಜಕೀಯ ರಂಗದಲ್ಲಿ ಉನ್ನತ ಸ್ಥಾನವನ್ನು ಕೊಟ್ಟ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನನ್ನನ್ನು ಸಚಿವ ಸ್ಥಾನದಿಂದ ತೆಗೆದಾಗಲೇ ನನ್ನ ಕೆಪಾಸಿಟಿ ಗೊತ್ತಾಯ್ತು. ನನಗೆ ವಯಸ್ಸಾಯ್ತು, ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಆಗುತ್ತಿಲ್ಲ. ಯಾರಿಗೂ ಬೇಡವಾಗಿದ್ದೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಮಂಡ್ಯದಲ್ಲಿ ವಾತಾವರಣ ಸರಿ ಇಲ್ಲ ಎಂದು ಕಾಂಗ್ರೆಸ್ ವರ್ಕಿಂಗ್ ಪ್ರೆಸಿಡೆಂಟ್ ಹೇಳಿದ್ರು. ರಾಜ್ಯದ 224 ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟವರೆಲ್ಲಾ ಗೆಲ್ತಾರಾ? ನಾನೊಬ್ಬ ಸೋಲುತ್ತೇನೆ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿದ್ದಾರೆ.

ನನಗೆ ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲರೂ ಗೊತ್ತು. ಏನು ಬೇಕಾದ್ರೂ ಮಾಡಬಹುದಿತ್ತು. ಜೆ.ಡಿ.ಎಸ್. ಪಕ್ಷದಿಂದ ಬಂದ ನಾನು ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಎಲ್ಲಾ ರಾಜಕಾರಣವನ್ನು ಬಲ್ಲೆ. ನಾನು ಯಾರಿಗೂ ಟಿಕೆಟ್ ಕೊಡಿ ಎಂದು ಹೇಳಿಲ್ಲ. ಯಾರ ಪರ ಪ್ರಚಾರಕ್ಕೂ ಹೋಗಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...