alex Certify
ಕನ್ನಡ ದುನಿಯಾ       Mobile App
       

Kannada Duniya

ದಿಗ್ಗಜರ ಸಮಾಗಮಕ್ಕೆ ಸಾಕ್ಷಿಯಾಗಲಿದೆ ಈ ಆಡಿಯೋ ರಿಲೀಸ್ ಸಮಾರಂಭ

ಬರೋಬ್ಬರಿ 14 ವರ್ಷಗಳ ಬಳಿಕ ಹೀರೊ ಆಗಿ ನಟಿಸುತ್ತಿರುವ ರೆಬಲ್ ಸ್ಟಾರ್ ಅಂಬರೀಶ್ ಅಭಿನಯದ ಬಹು ನಿರೀಕ್ಷಿತ ’ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ದಕ್ಷಿಣ ಭಾರತ ಚಿತ್ರರಂಗ ದಿಗ್ಗಜರ ಸಮಾಗಮಕ್ಕೆ ಸಾಕ್ಷಿಯಾಗಲಿದೆ.

ನಟ ಕಿಚ್ಚ ಸುದೀಪ್ ಅವರು ಹಿರಿಯ ನಟ ಅಂಬರೀಷ್ ಅವರಿಗೆ ಗೌವರ ನೀಡುವ ನಿಟ್ಟಿನಲ್ಲಿ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭವನ್ನು ಅದ್ದೂರಿಯಾಗಿ ನೆರವೇರಿಸಲು ಪ್ಲಾನ್ ಮಾಡಿದ್ದು, ಅದಕ್ಕಾಗಿ ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಇಡೀ ಕನ್ನಡ ಚಿತ್ರರಂಗದ ಎಲ್ಲ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ವಿಶೇಷವೆಂದರೆ, ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಚಿತ್ರರಂಗದ ಮಹಾನ್ ಕಲಾವಿದರನ್ನು ಆಹ್ವಾನಿಸಲು ಯೋಜನೆ ರೂಪಿಸಲಾಗಿದೆ. ಇನ್ನು ಖುದ್ದು ಅಂಬರೀಶ್, ದರ್ಶನ್ ರನ್ನ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದಾರೆ.

ಈಗಾಗಲೇ ಚಿರಂಜೀವಿ, ರಜನಿಕಾಂತ್, ಧನುಶ್, ಶತ್ರುಘ್ನ ಸಿನ್ಹಾ, ಮೋಹನ್ ಬಾಬು ಸೇರಿದಂತೆ ಅನೇಕರಿಗೆ ಆಹ್ವಾನ ನೀಡಲಾಗಿದ್ದು, ಒಂದೇ ವೇದಿಕೆಯಲ್ಲಿ ದಕ್ಷಿಣ ಭಾರತದ ಎಲ್ಲಾ ನೆಚ್ಚಿನ ನಟರನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಬಹುದು.

ಆಡಿಯೋ ರಿಲೀಸ್ ಕಾರ್ಯಕ್ರಮದ ದಿನಾಂಕ ಇನ್ನೂ ಫಿಕ್ಸ್ ಆಗಿಲ್ಲ. ಆದರೆ ಕಾರ್ಯಕ್ರಮದ ರೂಪುರೇಷೆಗಳು ಮಾತ್ರ ಪಕ್ಕಾ ಆಗಿದೆ. ಒಟ್ಟಾರೆ ‘ಅಂಬಿ ನಿಂಗ್ ವಯಸ್ಸಾಯ್ತೋ’ ಆಡಿಯೋ ರಿಲೀಸ್ ಕಾರ್ಯಕ್ರಮದ ಮೂಲಕ ಸ್ಯಾಂಡಲ್ ವುಡ್ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...