alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ- ಪಾಕ್ ಕ್ರಿಕೆಟ್ ಪಂದ್ಯದಲ್ಲಿ ರಾಷ್ಟ್ರಗೀತೆ ಹಾಡಲಿದ್ದಾರೆ ಬಿಗ್ ಬಿ

amitabh-bachchan-380-reuters1

ಭಾರತ ಮತ್ತು ಪಾಕಿಸ್ತಾನದ ನಡುವೆ ಇದೇ 19 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಹೈ ವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದ ಆರಂಭಕ್ಕೂ ಮುನ್ನ ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಲಿದ್ದಾರೆ.

ಹೌದು. ಭಾರತ ಹಾಗೂ ಪಾಕಿಸ್ತಾನದ ನಡುವಿನ 20-20 ವಿಶ್ವಕಪ್ ಪಂದ್ಯ ಆರಂಭಕ್ಕೆ ಮುನ್ನ ಅಮಿತಾಬ್ ಬಚ್ಚನ್ ಮತ್ತು ಪಾಕಿಸ್ತಾನದ ಸಂಗೀತಗಾರ ಶಫಖತ್ ಅಮನತ್ ಆಲಿ ಎರಡೂ ದೇಶಗಳ ರಾಷ್ಟ್ರಗೀತೆಗಳನ್ನು ಹಾಡಲಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಸ್ವತಃ ಅಮಿತಾಬ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ತಾವು ಪಂದ್ಯದ ವೇಳೆ ಉಪಸ್ಥಿತರಿರುವುದಾಗಿ ದೃಢಪಡಿಸಿದ್ದಾರೆ.

ಅಷ್ಟೇ ಅಲ್ಲ, @SrBachchan to sing national anthem in India-Pakistan World T20 clash ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದು, ಒಟ್ಟಾರೆ 19 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಭಾರತ- ಪಾಕ್ ಕ್ರಿಕೆಟ್ ಹಲವು ಘಟನೆಗಳಿಗೆ ಸಾಕ್ಷಿಯಾಗಲಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...