alex Certify
ಕನ್ನಡ ದುನಿಯಾ       Mobile App
       

Kannada Duniya

ಇಟಲಿಗೆ ಪ್ರಯಾಣ ಬೆಳೆಸಿದೆ ಅನುಷ್ಕಾ ಕುಟುಂಬ

ಏನೂ ಇಲ್ಲ ಏನೂ ಇಲ್ಲ ಎನ್ನುತ್ತಲೇ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಮದುವೆಗೆ ಎಲ್ಲ ಸಿದ್ಧತೆ ನಡೆಸುತ್ತಿದ್ದಾರೆ. ಮುಂದಿನ ವಾರ ಇಟಲಿಯಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ. ಅನುಷ್ಕಾ ಶರ್ಮಾ ಕುಟುಂಬ ಮುಂಬೈ ವಿಮಾನ ನಿಲ್ದಾಣದಲ್ಲಿ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ.

ನಿನ್ನೆ ರಾತ್ರಿ ಅನುಷ್ಕಾ, ತಂದೆ-ತಾಯಿ ಹಾಗೂ ಸಹೋದರ ಇಟಲಿಗೆ ಪ್ರಯಾಣ ಬೆಳೆಸಿದ್ದಾರೆ. ಮದುವೆ ಬಗ್ಗೆ ಕೇಳಿದ ಪ್ರಶ್ನೆಗೆ ಅನುಷ್ಕಾ ಯಾವುದೇ ಉತ್ತರ ನೀಡಿಲ್ಲ. ದೊಡ್ಡ ದೊಡ್ಡ ಬ್ಯಾಗ್ ನೊಂದಿಗೆ ಅನುಷ್ಕಾ ಕುಟುಂಬ ಇಟಲಿಗೆ ಪ್ರಯಾಣ ಬೆಳೆಸಿದೆ. ಡಿಸೆಂಬರ್ 9-12ರ ನಡುವೆ ಅನುಷ್ಕಾ-ಕೊಹ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗ್ತಿದೆ.

ಇಟಲಿಗೆ ಕುಟುಂಬ ಸಮೇತ ತೆರಳಿರುವ ಅನುಷ್ಕಾ ಪಂಡಿತರನ್ನೂ ತನ್ನ ಜೊತೆ ಕರೆದೊಯ್ದಿದ್ದಾಳೆ. ಮಾಹಿತಿ ಪ್ರಕಾರ ಇಟಲಿಯ ಮಿಲನ್ ನಗರದಲ್ಲಿ ಮದುವೆ ಸಮಾರಂಭ ನಡೆಯಲಿದೆ. ಮದುವೆ ಸಮಾರಂಭದಲ್ಲಿ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು ಮಾತ್ರ ಪಾಲ್ಗೊಳ್ಳಲಿದ್ದಾರೆ. ನಂತ್ರ ಡಿಸೆಂಬರ್ 21ರಂದು ಮುಂಬೈನಲ್ಲಿ ಆರತಕ್ಷತೆ ನಡೆಯಲಿದೆ ಎನ್ನಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...