alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಲ್ಲೂರು ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅನುಷ್ಕಾ

anu-kolur

ಉಡುಪಿ: ‘ಬಾಹುಬಲಿ’ ಖ್ಯಾತಿಯ ನಟಿ ಅನುಷ್ಕಾ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ದೇವಾಲಯ ಸಮಿತಿಯವರಿಗೂ ಮಾಹಿತಿ ನೀಡದೇ ಅನುಷ್ಕಾ ತಮ್ಮ ಕುಟುಂಬದವರು ಹಾಗೂ ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರ ಕುಟುಂಬದವರೊಂದಿಗೆ ಆಗಮಿಸಿದ್ದಾರೆ.

ದೇವಾಲಯಕ್ಕೆ ಅನುಷ್ಕಾ ಆಗಮಿಸಿದ್ದನ್ನು ಕಂಡ ಅಲ್ಲಿದ್ದವರು ತಮ್ಮ ಮೊಬೈಲ್ ಗಳಲ್ಲಿ ಫೋಟೋ ಕ್ಲಿಕ್ಕಿಸಿದ್ದಾರೆ.  ದೇವಾಲಯದ ಆಡಳಿತ ಮಂಡಳಿಯಿಂದ ವಿಶೇಷ ಪೂಜೆಗೆ ವ್ಯವಸ್ಥೆ ಮಾಡಲಾಗಿದೆ.

‘ಬಾಹುಬಲಿ -2’ ಭರ್ಜರಿ ಯಶಸ್ಸಿನ ಹಿನ್ನೆಲೆಯಲ್ಲಿ ಅನುಷ್ಕಾ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ‘ಅರುಂಧತಿ’, ‘ಬಾಹುಬಲಿ’, ‘ಸಿಂಗಂ’ ಸೇರಿದಂತೆ ಹಲವು ಚಿತ್ರಗಳಲ್ಲಿ ಅನುಷ್ಕಾ ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...