alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಕ್ಕಿಂ ರಾಯಭಾರಿಯಾಗಿ ಸಂಗೀತ ಮಾಂತ್ರಿಕ

ಗ್ಯಾಂಗ್ಟಕ್: ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಹಿಮಾಲಯ ತಪ್ಪಲಿನ ರಾಜ್ಯ ಸಿಕ್ಕಿಂನ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ.

ಸಿಕ್ಕಿಂನ ಪಾಲ್ಜೋರ್ ಕ್ರೀಡಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪವನ್ ಚಾಮ್ಲಿಂಗ್ ಅಧಿಕೃತ ಘೋಷಣೆ ಮಾಡಿದ್ದಾರೆ.

ಎ.ಆರ್. ರೆಹಮಾನ್ ಅವರು ಸಿಕ್ಕಿಂ ರಾಜ್ಯದ ರಾಯಭಾರಿಯಾಗಿದ್ದಾರೆ. ಪ್ರವಾಸೋದ್ಯಮದ ಬ್ರಾಂಡ್ ಅಂಬಾಸಿಡರ್ ಆಗಿ ಅವರು ತಮ್ಮ ಸಮಯವನ್ನು ಮೀಸಲಿಟ್ಟು ಸಹಕಾರ ನೀಡಲಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲಿದ್ದಾರೆ ಎಂದು ಸಿ.ಎಂ. ಹೇಳಿದ್ದಾರೆ.

ಇದಕ್ಕೆ ಸಂತಸ ವ್ಯಕ್ತಪಡಿಸಿರುವ ರೆಹಮಾನ್, ಸಿಕ್ಕಿಂ ಪ್ರಾಕೃತಿಕ ಸೌಂದರ್ಯಕ್ಕೆ, ವೈವಿಧ್ಯತೆಗೆ ಹೆಸರಾದ ನಾಡಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...