alex Certify
ಕನ್ನಡ ದುನಿಯಾ       Mobile App
       

Kannada Duniya

ತನಗೇ ಗೊತ್ತಿಲ್ಲದೇ ನಡೆದ ವಿಷಯ ತಿಳಿದ ನಟಿಗೆ ಶಾಕ್…!

ಬೆಂಗಳೂರು: ನಟಿ ಅಶ್ವಿನಿಗೌಡ ಅವರಿಗೆ ಗೊತ್ತಿಲ್ಲದಂತೆ ಅವರ ಹೆಸರಲ್ಲಿ ನಕಲಿ ಖಾತೆ ತೆರೆದು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಅಶ್ವಿನಿ ಗೌಡ ಅವರಿಗೆ ರಾಜಾಜಿನಗರ ಪೊಲೀಸ್ ಠಾಣೆಯಿಂದ 25 ಲಕ್ಷ ರೂ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಬಂದಿದ್ದು, ಈ ಬಗ್ಗೆ ವಿಚಾರಿಸಿದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ.

ವಿಜಯನಗರದ ಆರ್.ಪಿ.ಸಿ. ಲೇಔಟ್ ನಲ್ಲಿರುವ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಅಶ್ವಿನಿಗೌಡ ಅವರ ಹೆಸರಲ್ಲಿ ಬ್ಯಾಂಕಿನಲ್ಲಿ ಖಾತೆ ತೆರೆದು ವಹಿವಾಟು ನಡೆಸಲಾಗಿದೆ. ಚೆಕ್ ಬೌನ್ಸ್ ಪ್ರಕರಣ ದಾಖಲಾಗುವಂತೆ ಮಾಡಿ ವಂಚಿಸಲಾಗಿದೆ.

ಸುಮಾರು 3 ವರ್ಷಗಳ ಹಿಂದೆಯೇ ಪ್ರಕರಣ ನಡೆದಿದ್ದು, ಅಶ್ವಿನಿಗೌಡ ಈಗ ವಂಚಿಸಿದ ಬ್ಯಾಂಕ್ ಅಧ್ಯಕ್ಷ, ವ್ಯವಸ್ಥಾಪಕರು ಸೇರಿ ಹಲವರ ವಿರುದ್ಧ, ಮಹಾಲಕ್ಷ್ಮಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...