alex Certify
ಕನ್ನಡ ದುನಿಯಾ       Mobile App
       

Kannada Duniya

ನಟ ಚೇತನ್ ವಿರುದ್ಧ ಪ್ರತಿಭಟನೆ, ‘ಅತಿರಥ’ ಪೋಸ್ಟರ್ ಗೆ ಹಾನಿ

ಚಾಮರಾಜನಗರ: ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ವಿರುದ್ಧ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಚೇತನ್ ಅಭಿನಯದ ‘ಅತಿರಥ’ ಚಿತ್ರ ಪ್ರದರ್ಶನ ನಡೆಯುತ್ತಿದ್ದ ಚಾಮರಾಜನಗರದ ಚಿತ್ರ ಮಂದಿರದ ಬಳಿ ಹಾಕಲಾಗಿದ್ದ ಪೋಸ್ಟರ್ ಗಳಿಗೆ ಹಾನಿ ಮಾಡಿದ್ದಾರೆ.

ವೀರಶೈವ – ಲಿಂಗಾಯತ ವಿಚಾರದ ಬಗ್ಗೆ ಮಾತನಾಡುತ್ತಾ, ಹಿಂದೂ ಧರ್ಮ ಮತ್ತು ಸ್ವಾಮೀಜಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಚೇತನ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ನಟರಾಗಿ ಅವರನ್ನು ಮೆಚ್ಚಿಕೊಳ್ಳುತ್ತೇವೆ. ಅವರು ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚೇತನ್, ನನ್ನನ್ನು ಹಿಂದೂ ವಿರೋಧಿ ಎನ್ನುವಂತೆ ಬಿಂಬಿಸಲಾಗುತ್ತಿದೆ. ನನ್ನನ್ನು ಕೆಲವರು ಟಾರ್ಗೆಟ್ ಮಾಡಿದ್ದಾರೆ. ಎಲ್ಲಾ ವಿಚಾರಗಳನ್ನು ಚರ್ಚಿಸಲು ಅವಕಾಶವಿದೆ. ಆದರೂ, ರಾಜಕೀಯ ಕಾರಣದಿಂದ ತಮ್ಮ ವಿರುದ್ಧ ಆರೋಪ ಮಾಡಲಾಗ್ತಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...