alex Certify
ಕನ್ನಡ ದುನಿಯಾ       Mobile App
       

Kannada Duniya

ಯಶ್ ‘ಗಜಕೇಸರಿ’, ಸಂಚಾರಿ ವಿಜಯ್ ಗೆ ಪ್ರಶಸ್ತಿ

gaG TYU

2014-15 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲಾಗಿದ್ದು, ‘ನಾನು ಅವನಲ್ಲ ಅವಳು’ ಚಿತ್ರದ ಸಂಚಾರಿ ವಿಜಯ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಲಕ್ಷ್ಮಿ ಗೋಪಾಲಸ್ವಾಮಿ ಅವರು ‘ವಿದಾಯ’ ಸಿನಿಮಾಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

‘ಹರಿವು’ ಮೊದಲ ಅತ್ಯುತ್ತಮ, ‘ಅಭಿಮನ್ಯು’ ಎರಡನೇ ಅತ್ಯುತ್ತಮ ಹಾಗೂ ‘ಹಗ್ಗದ ಕೊನೆ’ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗಳಿಸಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಗಜಕೇಸರಿ’ ಅತ್ಯುತ್ತಮ ಜನಪ್ರಿಯ ಸಾಮಾಜಿಕ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ ‘ಬಾನಾಡಿ’ಗೆ ಸಿಕ್ಕಿದೆ. ಪ್ರಥಮ ನಿರ್ದೇಶಕರ ಅತ್ಯುತ್ತಮ ಚಿತ್ರ ಪ್ರಶಸ್ತಿ ‘ಉಳಿದವರು ಕಂಡಂತೆ’ ಚಿತ್ರಕ್ಕೆ ಬಂದಿದೆ. ಅದೇ ರೀತಿ ಅರುಣ್ ದೇವಸ್ಯ ಅತ್ಯುತ್ತಮ ಪೋಷಕ ನಟ, ಬಿ. ಜಯಶ್ರೀ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಗಳಿಸಿದ್ದಾರೆ.

‘ನಾನು ಅವನಲ್ಲ ಅವಳು’ ಅತ್ಯುತ್ತಮ ಕತೆ, ‘ವಿದಾಯ’ ಅತ್ಯುತ್ತಮ ಚಿತ್ರಕತೆ, ‘ತಿಪ್ಪಜ್ಜಿ ಸರ್ಕಲ್’ ಅತ್ಯುತ್ತಮ ಸಂಭಾಷಣೆ ಪ್ರಶಸ್ತಿ ಪಡೆದಿವೆ. ಬರಗೂರು ರಾಮಚಂದ್ರಪ್ಪ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ಬಸಂತ್ ಕುಮಾರ್ ಪಾಟೀಲ್ ಅವರಿಗೆ ಡಾ. ರಾಜ್ ಕುಮಾರ್ ಪ್ರಶಸ್ತಿ, ಸುರೇಶ್ ಕೃಷ್ಣ ಅರಸ್ ಅವರಿಗೆ ಡಾ. ವಿಷ್ಣುವರ್ಧನ್ ಪ್ರಶಸ್ತಿ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...