alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಎಸ್.ವೈ. ಪಾತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ..?

bsy-s

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೀವನಾಧಾರಿತ ಸಿನಿಮಾ ನಿರ್ಮಾಣವಾಗುತ್ತಿರುವ ಬೆನ್ನಲ್ಲೇ ಮತ್ತೊಬ್ಬರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುರಿತ ಚಿತ್ರ ನಿರ್ಮಾಣಕ್ಕೆ ತಯಾರಿ ನಡೆದಿದೆ.

ಎಸ್. ನಾರಾಯಣ ನಿರ್ದೇಶನವಿರುವ ‘ಭೂಮಿಪುತ್ರ’ ಸಿನಿಮಾದಲ್ಲಿ ಹೆಚ್.ಡಿ.ಕೆ. ಪಾತ್ರದಲ್ಲಿ ಅರ್ಜುನ್ ಸರ್ಜಾ ಅಭಿನಯಿಸಿದ್ದಾರೆ

ಇನ್ನು ಯಡಿಯೂರಪ್ಪ ಅವರ ಕುರಿತಾದ ಸಿನಿಮಾ ನಿರ್ಮಾಣಕ್ಕೆ ಬಿ.ಜೆ.ಪಿ. ಮುಖಂಡ ರುದ್ರೇಶ್ ಮುಂದಾಗಿದ್ದಾರೆ. ಈ ಚಿತ್ರವನ್ನು ಎಂ.ಎಸ್. ರಮೇಶ್ ನಿರ್ದೇಶಿಸಲಿದ್ದು, ಯಡಿಯೂರಪ್ಪ ಪಾತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಬಿ.ಎಸ್.ವೈ. ಬಾಲ್ಯ, ಜೀವನ, ರೈತ ಹೋರಾಟ, ಸರ್ಕಾರ ರಚನೆ ಸೇರಿದಂತೆ ಹಲವು ವಿಚಾರಗಳನ್ನು ಸಿನಿಮಾ ಒಳಗೊಂಡಿರುತ್ತದೆ. ಫಿಲಂ ಚೇಂಬರ್ ನಲ್ಲಿ ‘ನೇಗಿಲಯೋಗಿ’, ‘ಮಣ್ಣಿನಮಗ’ ಹೆಸರಿನಲ್ಲಿ ಟೈಟಲ್ ನೋಂದಣಿ ಮಾಡಿಸಲಾಗಿದೆ.

ಚಿತ್ರದಲ್ಲಿ ಕುಮಾರ್ ಬಂಗಾರಪ್ಪ, ಶ್ರೀನಗರ ಕಿಟ್ಟಿ, ಜಗ್ಗೇಶ್, ಶ್ರುತಿ, ತಾರಾ, ಅಭಿನಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಈ ಸಿನಿಮಾ ಕುರಿತಾಗಿ ಕುತೂಹಲ ಮೂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...