alex Certify
ಕನ್ನಡ ದುನಿಯಾ       Mobile App
       

Kannada Duniya

ರಾಸಲೀಲೆ ವಿಡಿಯೊ ಬಹಿರಂಗ: ನಟಿ ಆತ್ಮಹತ್ಯೆ ಯತ್ನ

ಬೆಂಗಳೂರು: ಸ್ಯಾಂಡಲ್ ವುಡ್ ನಟಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಅವರು ಪ್ರಾಣಾಯದಿಂದ ಪಾರಾಗಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರು ಹುಣಸಮಾರನಹಳ್ಳಿಯ ಮದ್ದೇವಣಾಪುರ ಮಠದ ದಯಾನಂದ ಸ್ವಾಮಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗಿ ವಿಡಿಯೋದಲ್ಲಿರುವುದು ಸ್ಯಾಂಡಲ್ ನಟಿ ಎಂದು ಹೇಳಲಾಗಿತ್ತು.

ತಮ್ಮ ಹೆಸರು ಕೇಳಿಬಂದಿದ್ದಕ್ಕೆ ಮನನೊಂದ ನಟಿ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯ ಬಳಿಕ ಸ್ವಂತ ಊರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ಬಂದಿದ್ದ ನಟಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.

ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಒಂದೆರಡು ದಿನಗಳಲ್ಲೇ ನಟಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಈ ಕುರಿತು ಹೇಳಿಕೆ ನೀಡಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಘಟನೆ ಬೆಳಕಿಗೆ ಬಂದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದ ನಟಿ, ವಿಡಿಯೊದಲ್ಲಿರುವುದು ತಾವಲ್ಲ. ವಿಡಿಯೊ ಎಡಿಟ್ ಮಾಡಿರಬಹುದೆಂದು ಎಂದು ಹೇಳಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...