alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ‘ನೀಲಿರಾಣಿ’ ಕುಣಿತಕ್ಕೆ ಬಿತ್ತು ಬ್ರೇಕ್

ಬೆಂಗಳೂರು: ಇದೇ ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಮಾಜಿ ಪೋರ್ನ್ ಸ್ಟಾರ್, ಬಾಲಿವುಡ್ ನಟಿ ಸನ್ನಿಲಿಯೋನ್ ಕಾರ್ಯಕ್ರಮವನ್ನು ರದ್ದುಪಡಿಸುವಂತೆ ಗೃಹಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯೊಂದು ಹೊಸ ವರ್ಷಾಚರಣೆ ಪ್ರಯುಕ್ತ ಸನ್ನಿಲಿಯೋನ್ ನೈಟ್ಸ್ ಕಾರ್ಯಕ್ರಮ ಏರ್ಪಡಿಸಿತ್ತು. ಇದಕ್ಕೆ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಕಾರಣದಿಂದ ಕಾರ್ಯಕ್ರಮ ರದ್ದುಪಡಿಸಲು ತೀರ್ಮಾನಿಸಲಾಗಿದೆ.

ನಟಿ ಸನ್ನಿ ಲಿಯೋನ್ ಕಾರ್ಯಕ್ರಮವನ್ನು ಆಯೋಜಿಸಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ರಾಮಲಿಂಗಾ ರೆಡ್ಡಿ, ನಮ್ಮ ಸಂಸ್ಕೃತಿಗೆ ಸನ್ನಿಲಿಯೋನ್ ಕಾರ್ಯಕ್ರಮ ಪೂರಕವಾಗಿಲ್ಲ. ಹಾಗಾಗಿ ಕಾರ್ಯಕ್ರಮವನ್ನು ರದ್ದುಪಡಿಸುವಂತೆ ಸೂಚಿಸಿದ್ದೇನೆ. ಒಂದು ವೇಳೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ಅದನ್ನು ರದ್ದುಪಡಿಸುವಂತೆ ಆಯುಕ್ತರಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...