alex Certify
ಕನ್ನಡ ದುನಿಯಾ       Mobile App
       

Kannada Duniya

ಸನ್ನಿ ಲಿಯೊನ್ ನಿರೀಕ್ಷೆಯಲ್ಲಿದ್ದವರಿಗೊಂದು ಸುದ್ದಿ….

ಬೆಂಗಳೂರು: ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೊನ್ ಕಾರ್ಯಕ್ರಮಕ್ಕೆ ಅನುಮತಿ ನೀಡದಿರಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.

ಸನ್ನಿ ಲಿಯೊನ್ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು. ಗೃಹ ಸಚಿವರು ಕೂಡ ಅಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡದಂತೆ ಸೂಚಿಸಿದ್ದರು.

ಕಾರ್ಯಕ್ರದ ಆಯೋಜಕರು ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು. ಜನರ ರಕ್ಷಣೆ ದೃಷ್ಠಿಯಿಂದ ಡಿಸೆಂಬರ್ 31 ರ ಸನ್ನಿ ಲಿಯೊನ್ ಕಾರ್ಯಕ್ರಮಕ್ಕೆ ಅನುಮತಿ ನೀಡದಿರಲು ಬೆಂಗಳೂರು ಪೊಲೀಸರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ತಮ್ಮ ಕಾರ್ಯಕ್ರಮಕ್ಕೆ ಅನುಮತಿ ನೀಡದಿರುವುದು ಮತ್ತು ವಿರೋಧ ವ್ಯಕ್ತವಾಗಿದ್ದರಿಂದ ಬಾರದಿರಲು ಸನ್ನಿ ಲಿಯೊನ್ ನಿರ್ಧರಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...