alex Certify
ಕನ್ನಡ ದುನಿಯಾ       Mobile App
       

Kannada Duniya

ಅತಿ ಹೆಚ್ಚು ಗಳಿಕೆ ಕಂಡ ಚಿತ್ರಗಳ ಸಾಲಿಗೆ ಸೇರಿದ ‘ಭರತ್ ಆನೇ ನೇನು’

2 ವರ್ಷಗಳ ಕಾಲ ಸತತ ಸೋಲಿನಿಂದ ಕಂಗೆಟ್ಟಿದ್ದ ಪ್ರಿನ್ಸ್ ಮಹೇಶ್ ಬಾಬು ಸಂಭ್ರಮದಲ್ಲಿದ್ದಾರೆ. ಮಹೇಶ್ ಬಾಬು ಅಭಿನಯದ ಹಿಂದಿನ ಚಿತ್ರಗಳು ನಿರೀಕ್ಷಿತ ಯಶಸ್ಸು ಗಳಿಸದ ಕಾರಣ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತ್ತು.

ಆದರೆ, ಕಳೆದ ಏಪ್ರಿಲ್ 20 ರಂದು ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿರುವ ‘ಭರತ್ ಆನೇ ನೇನು’ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚು ಮಾಡಿದೆ.

ರಾಜಕಾರಣಿಯಾಗಿ ಮಹೇಶ್ ಬಾಬು ಧೂಳೆಬ್ಬಿಸುತ್ತಿದ್ದಾರೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬಂದಿರುವ ‘ಭರತ್ ಆನೇ ನೇನು’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮಹೇಶ್ ಬಾಬು ಚಿತ್ರಗಳಲ್ಲಿಯೇ ಹೆಚ್ಚು ಗಳಿಕೆ ಕಂಡ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಚಿತ್ರ ರಿಲೀಸ್ ಆದ 22 ದಿನಗಳಲ್ಲಿ ಸುಮಾರು 205 ಕೋಟಿ ರೂ. ಕಲೆಕ್ಷನ್ ಮಾಡಿದೆ.

ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಟ್ರೇಲರ್, ಸಾಂಗ್ ಹೊಸ ಮೇನಿಯಾ ಸೃಷ್ಟಿಸಿದ್ದು, ಅಭಿಮಾನಿಗಳ ಸಂಭ್ರಮ ಜೋರಾಗಿದೆ. ‘ಭರತ್ ಆನೇ ನೇನು’ ಚಿತ್ರದೊಂದಿಗೆ ಪ್ರಿನ್ಸ್ ಗ್ರೇಟ್ ಕಂಬ್ಯಾಕ್ ಮಾಡಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...