alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರೇ ದಿನದಲ್ಲಿ ‘ಭರ್ಜರಿ’ ಕಲೆಕ್ಷನ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಭರ್ಜರಿ’ ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಫಸ್ಟ್ ಡೇ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದ ಭರ್ಜರಿ ಮೂರೇ ದಿನಕ್ಕೆ 16 ಕೋಟಿ ರೂ. ಗೂ ಅಧಿಕ ಗಳಿಕೆ ಕಂಡಿದೆ.

ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ಈ ಚಿತ್ರ ತಡವಾಗಿ ಬಿಡುಗಡೆಯಾದರೂ, ಅಭಿಮಾನಿಗಳು, ಸಿನಿ ರಸಿಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮೊದಲ ದಿನವೇ 6.83 ಕೋಟಿ ರೂ. ಕಲೆಕ್ಷನ್ ಮಾಡಿದ್ದ ‘ಭರ್ಜರಿ’ ಶನಿವಾರ ಮತ್ತು ಭಾನುವಾರವೂ ತುಂಬಿದ ಗೃಹಗಳಲ್ಲಿ ಪ್ರದರ್ಶನ ಕಂಡಿದೆ. 3 ದಿನಕ್ಕೆ 16 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ.

ಚೇತನ್ ಕುಮಾರ್ ನಿರ್ದೇಶನ, ಆರ್. ಶ್ರೀನಿವಾಸ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಧ್ರುವ ಸರ್ಜಾ, ರಚಿತಾ ರಾಮ್, ಹರಿಪ್ರಿಯಾ, ತಾರಾ, ಸಾಧುಕೋಕಿಲ ಮೊದಲಾದವರು ಅಭಿನಯಿಸಿದ್ದಾರೆ.

ಧ್ರುವ ಸರ್ಜಾರ ಹಿಂದಿನ ಎರಡೂ ಸಿನಿಮಾಗಳು ಯಶಸ್ವಿಯಾಗಿದ್ದು, 3 ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇತ್ತು. ನಿರೀಕ್ಷೆಗೂ ಮೀರಿ ‘ಭರ್ಜರಿ’ ಎಲ್ಲಾ ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...