alex Certify
ಕನ್ನಡ ದುನಿಯಾ       Mobile App
       

Kannada Duniya

ಚಿತ್ರದುರ್ಗದಿಂದ ಸ್ಪರ್ಧೆಗೆ ಭಾವನಾ ರೆಡಿ

ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭೆ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯುವುದಾಗಿ ನಟಿ ಹಾಗೂ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಭಾವನಾ ತಿಳಿಸಿದ್ದಾರೆ.

ಚಿತ್ರದುರ್ಗದ ಬುರುಜನಹಟ್ಟಿಯ ಹುಡುಗಿ ನಾನಾಗಿದ್ದು, ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸಬೇಕೆಂಬ ಇಚ್ಛೆ ಹೊಂದಿದ್ದೇನೆ. ಪಕ್ಷದ ಹಿರಿಯರು ಬೆನ್ನು ತಟ್ಟಿ ಕಳಿಸಿದ್ದಾರೆ. ನಾನೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಪಕ್ಷದ ಹಿರಿಯರು, ಕಾರ್ಯಕರ್ತರು, ಮುಖಂಡರು, ಸಚಿವರೊಂದಿಗೆ ಚರ್ಚೆ ನಡೆಸಿ ಮಾರ್ಗದರ್ಶನ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

ಹಿಂದಿನಿಂದಲೂ ಚಿತ್ರದುರ್ಗದೊಂದಿಗೆ ಒಡನಾಟವಿದೆ. ಅವಕಾಶ ಸಿಕ್ಕರೆ ಸ್ಪರ್ಧೆ ಮಾಡುತ್ತೇನೆ. ರಾಜಕೀಯ, ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತೇನೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...