alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿಗೆ ಹಿರಿಯರ ಒಪ್ಪಿಗೆ, ಮದುವೆಗೆ ರೆಡಿಯಾದ ‘ಬಿಗ್ ಬಾಸ್’ ಸ್ಪರ್ಧಿ

‘ಚಿ.ಸೌ. ಸಾವಿತ್ರಿ’, ‘ಮುತ್ತಿನ ಪಲ್ಲಕ್ಕಿ’ ಸೇರಿದಂತೆ ಹಲವಾರು ಧಾರಾವಾಹಿ, ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಗೌತಮಿ ಗೌಡ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

‘ಬಿಗ್ ಬಾಸ್’ ಸೀಸನ್ 3 ರಲ್ಲಿ ಸ್ಪರ್ಧಿಯಾಗಿದ್ದ ನಟಿ ಗೌತಮಿ ಗೌಡ ಹಾಗೂ ಜಾರ್ಜ್ ಕ್ರಿಸ್ಟಿ ಅವರ ನಿಶ್ಚಿತಾರ್ಥ ಇತ್ತೀಚೆಗೆ ನೆರವೇರಿದೆ. ಗೌತಮಿ ಅವರು ಧಾರಾವಾಹಿ, ಸಿನಿಮಾಗಳ ಮೂಲಕ ಗಮನ ಸೆಳೆದಿದ್ದು, ‘ಬಿಗ್ ಬಾಸ್’ನಲ್ಲಿಯೂ ಮಿಂಚಿದ್ದರು.

ಗೌತಮಿ ಗೌಡ ಹಾಗೂ ಜಾರ್ಜ್ ಕ್ರಿಸ್ಟಿಯವರ ಪ್ರೀತಿಗೆ ಮನೆಯವರು ಒಪ್ಪಿದ್ದು, ನಿಶ್ಚಿತಾರ್ಥ ನೆರವೇರಿದೆ. ಪ್ರೀತಿಸಿದ ಯುವಕನೊಂದಿಗೆ ಮದುವೆಯ ಖುಷಿಯಲ್ಲಿರುವ ಗೌತಮಿ ಗೌಡ, ತಮ್ಮ ನಿಶ್ಚಿತಾರ್ಥದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...