alex Certify ‘ಬಿಗ್ ಬಾಸ್’ 10ನೇ ಸೀಸನ್ ಗೆದ್ದ ಕಾರ್ತಿಕ್ ಗೆ 50 ಲಕ್ಷ ರೂ., ಕಾರ್, ಎಲೆಕ್ಟ್ರಿಕ್ ಸ್ಕೂಟರ್ ಬಹುಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಿಗ್ ಬಾಸ್’ 10ನೇ ಸೀಸನ್ ಗೆದ್ದ ಕಾರ್ತಿಕ್ ಗೆ 50 ಲಕ್ಷ ರೂ., ಕಾರ್, ಎಲೆಕ್ಟ್ರಿಕ್ ಸ್ಕೂಟರ್ ಬಹುಮಾನ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 10ರಲ್ಲಿ ಕಾರ್ತಿಕ್ ಮಹೇಶ್ ವಿಜೇತರಾಗಿದ್ದಾರೆ.

ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದು, ಸಂಗೀತ ಶೃಂಗೇರಿಗೆ ಮೂರನೇ ಸ್ಥಾನ ದೊರೆತಿದೆ. ನಟ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ರೋಚಕ ಅಂತಿಮ ಹಣಾಹಣಿ ನಡೆದಿದ್ದು, ಅಂತಿಮವಾಗಿ ಕಾರ್ತಿಕ್ ಮಹೇಶ್ ವಿಜೇತರಾಗಿದ್ದಾರೆ.

ಅವರಿಗೆ ಬಹುಮಾನವಾಗಿ 50 ಲಕ್ಷ ರೂ. ನಗದು, ಮಾರುತಿ ಸುಜುಕಿ ಬ್ರೆಜಾ ಕಾರ್, ಬೌನ್ಸ್ ಇನ್ಫಿನಿಟಿ ಎಲೆಕ್ಟ್ರಿಕ್ ಸ್ಕೂಟರ್ ನೀಡಲಾಗಿದೆ. ಡ್ರೋನ್ ಪ್ರತಾಪ್ ಅವರಿಗೆ 10 ಲಕ್ಷ ರೂ., ಬೌನ್ಸ್ ಇನ್ಫಿನಿಟಿ ಎಲೆಕ್ಟ್ರಿಕ್ ಸ್ಕೂಟರ್ ಬಹುಮಾನವಾಗಿ ನೀಡಲಾಗಿದೆ. ಎರಡನೇ ರನ್ನರ್ ಅಪ್ ಆಗಿರುವ ಸಂಗೀತಾ ಶೃಂಗೇರಿ ಅವರಿಗೆ 7 ಲಕ್ಷ ರೂ. ಬಹುಮಾನ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...