alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿಗ್ ಬಾಸ್’ ವಿನ್ನರ್ ಚಂದನ್ ಶೆಟ್ಟಿಗೆ ಭರ್ಜರಿ ಸ್ವಾಗತ

ಬೆಂಗಳೂರು: ‘ಬಿಗ್ ಬಾಸ್’ ಸೀಸನ್ 5 ವಿನ್ನರ್ ಚಂದನ್ ಶೆಟ್ಟಿ ಅವರಿಗೆ ಅಭಿಮಾನಿಗಳು, ಬೆಂಬಲಿಗರು ಅದ್ಧೂರಿ ಸ್ವಾಗತ ನೀಡಿದ್ದಾರೆ.

ಬಿಡದಿಯ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ಕಾರ್ಯಕ್ರಮ ಮುಗಿಸಿದ ನಂತರ ಅವರು, ಅಲ್ಲಿಂದ ಹೊರ ಬಂದ ಬಳಿಕ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದ್ದಾರೆ. ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಚಂದನ್  ಅವರನ್ನು ತೆರೆದ ಜೀಪ್ ನಲ್ಲಿ ಮೆರವಣಿಗೆ ನಡೆಸಲಾಗಿದೆ.

ಅಲ್ಲಿಂದ ನಾಗರಬಾವಿಯಲ್ಲಿನ ಮನೆಯವರೆಗೆ ಅದ್ಧೂರಿ ಮೆರವಣಿಗೆಯಲ್ಲಿ ಕರೆತರಲಾಗಿದೆ. ಸಾವಿರಾರು ಸಂಖ್ಯೆಯಲ್ಲಿದ್ದ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

ಅಭಿಮಾನಿಗಳು, ಸ್ನೇಹಿತರನ್ನು ಕಂಡು ಪುಳಕಿತರಾದ ಚಂದನ್ ಎಲ್ಲರತ್ತ ಕೈ ಬೀಸಿ ಧನ್ಯವಾದ ಹೇಳಿದ್ದಾರೆ. ಮನೆಯ ಬಳಿ ಅಭಿಮಾನಿಗಳ ಸಂಭ್ರಮವಂತೂ ಮುಗಿಲು ಮುಟ್ಟಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...