alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ಅಭಿಮಾನಿಗಳಿಗೆ ಡಬಲ್ ಧಮಾಕ..!

darsh-bir

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆಯಷ್ಟೇ, ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ದರ್ಶನ್ ಅಭಿನಯದ ಭಾರೀ ನಿರೀಕ್ಷೆ ಚಿತ್ರ ‘ಚಕ್ರವರ್ತಿ’ ಬಿಡುಗಡೆಗೆ ಸಿದ್ಧವಾಗುತ್ತಿದೆ. ಮಾರ್ಚ್ ನಲ್ಲಿ ‘ಚಕ್ರವರ್ತಿ’ ಬೆಳ್ಳಿತೆರೆಗೆ ಎಂಟ್ರಿ ಕೊಡಲಿದ್ದು, ಇದೇ ವರ್ಷ ದರ್ಶನ್ ಅಭಿನಯದ 50 ನೇ ಸಿನಿಮಾ ಸೆಟ್ಟೇರುತ್ತಿದೆ.

50 ನೇ ಸಿನಿಮಾ ಹೊಸ್ತಿಲಲ್ಲಿರುವ ದರ್ಶನ್, ಎಂದಿನಂತೆ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 50 ನೇ ಸಿನಿಮಾದ ಎಂದ ಮೇಲೆ ನಿರೀಕ್ಷೆ ಜಾಸ್ತಿಯೇ ಇರುತ್ತದೆ. ನಿರೀಕ್ಷೆ ತಕ್ಕಂತೆಯೇ ಚಿತ್ರ ನಿರ್ಮಾಣವಾಗಲಿದೆ ಎಂದು ಅವರು ಹೇಳಿದ್ದಾರೆ.

ದರ್ಶನ್ ಅಭಿನಯದ 50 ನೇ ಚಿತ್ರವನ್ನು ‘ಚೌಕ’ ನಿರ್ದೇಶಕ ತರುಣ್ ಸುಧೀರ್ ನಿರ್ದೇಶನ ಮಾಡಲಿದ್ದಾರೆ. 49 ನೇ ಚಿತ್ರವನ್ನು ಪ್ರಕಾಶ್ ನಿರ್ದೇಶಿಸಲಿದ್ದಾರೆ. ಈ ವರ್ಷ ದರ್ಶನ್ ಅಭಿಮಾನಿಗಳ ಸಂಭ್ರಮ ಹೆಚ್ಚಾಗಲಿದೆ. ಅಭಿಮಾನಿಗಳು ಭಾರೀ ನಿರೀಕ್ಷೆಯ ‘ಚಕ್ರವರ್ತಿ’ಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...