alex Certify
ಕನ್ನಡ ದುನಿಯಾ       Mobile App
       

Kannada Duniya

ಬಹುಭಾಷಾ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

kamal-hassan-admitted-in-hospital

ಚೆನ್ನೈ: ಯುನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಅವರನ್ನು ಚೆನ್ನೈ ಅಪೊಲೊ ಆಸ್ಪತ್ರೆಗೆ ಸೇರಿಸಲಾಗಿದೆ. ಚೆನ್ನೈನ ಆಳ್ವಾರ್ ಪೇಟ್ ನಲ್ಲಿರುವ ತಮ್ಮ ನಿವಾಸದಲ್ಲಿ ಕಮಲ್ ಹಾಸನ್ ಕಾಲು ಜಾರಿ ಬಿದ್ದು, ಗಾಯಗೊಂಡಿದ್ದಾರೆ ಎನ್ನಲಾಗಿದೆ.

ತಮಿಳು, ತೆಲುಗು, ಹಿಂದಿ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅಭಿನಯಿಸಿರುವ ಕಮಲ್ ಹಾಸನ್ ವಿಭಿನ್ನ ಪಾತ್ರಗಳು ಮತ್ತು ಚಿತ್ರಕತೆ ಮೂಲಕ ಅಭಿಮಾನಿಗಳ ಮನಸೂರೆಗೊಂಡ ನಟರಾಗಿದ್ದು, ಅವರು ಚೆನ್ನೈನ ಆಳ್ವಾರ್ ಪೇಟ್ ನಲ್ಲಿರುವ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಅಪೊಲೊ ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು, ಸ್ಕ್ಯಾನಿಂಗ್ ಮಾಡಿದ್ದು, ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದೆ.

ಕಮಲ್ ಹಾಸನ್ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಹಲವಾರು ಅಭಿಮಾನಿಗಳು ಆಸ್ಪತ್ರೆ ಬಳಿ ಜಮಾಯಿಸಿ ಕಮಲ್ ಆರೋಗ್ಯ ವಿಚಾರಿಸಲು ಮುಂದಾಗಿದ್ದಾರೆ. ಕಮಲ್ ಹಾಸನ್ ಕಾಲಿಗೆ ಪೆಟ್ಟಾಗಿದ್ದು, ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...