alex Certify
ಕನ್ನಡ ದುನಿಯಾ       Mobile App
       

Kannada Duniya

ಕೆನಡಾದಲ್ಲೇ ನಟ ಚಂದ್ರಶೇಖರ್ ಅಂತ್ಯಕ್ರಿಯೆ

ಬೆಂಗಳೂರು: ಹೃದಯಾಘಾತದಿಂದ ನಿನ್ನೆ ನಿಧನರಾದ ‘ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ಖ್ಯಾತಿಯ ಹಿರಿಯ ನಟ ಚಂದ್ರಶೇಖರ್ ಅವರ ಅಂತ್ಯಕ್ರಿಯೆಯನ್ನು ಕೆನಡಾದಲ್ಲಿಯೇ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ಭಾರತಕ್ಕೆ ಚಂದ್ರಶೇಖರ್ ಅವರ ಪಾರ್ಥಿವ ಶರೀರ ತರಲು ಅನುಮತಿ ಸಿಗದ ಹಿನ್ನಲೆಯಲ್ಲಿ ಕೆನಡಾದಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುವುದು. ಅವರ ಪುತ್ರಿ ತಾನ್ಯಾ ಕೆನಡಾಕ್ಕೆ ತೆರಳಿದ್ದಾರೆ. ಅಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.

ಆಪ್ತ ವಲಯದಲ್ಲಿ ಕೆನಡಾ ಚಂದ್ರು ಎಂದೇ ಕರೆಯಲ್ಪಡುತ್ತಿದ್ದ ಚಂದ್ರಶೇಖರ್, ‘ಎಡಕಲ್ಲು ಗುಡ್ಡದ ಮೇಲೆ’ ಸೇರಿದಂತೆ ಸುಮಾರು 40 ಚಿತ್ರಗಳಲ್ಲಿ ನಟಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...