alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತದ ಕುರಿತು ದಾಖಲಾಗಿಲ್ಲ ಯಾವುದೇ ದೂರು

ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಗಿನ ಜಾವ ಮೈಸೂರಿನ ಹಿನಕಲ್ ಬಳಿ ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವವರನ್ನು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೀಡಾದ ಕಾರಿನಲ್ಲಿ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ದರ್ಶನ್ ಸ್ನೇಹಿತರೊಬ್ಬರು ಪ್ರಯಾಣಿಸುತ್ತಿದ್ದರೆಂದು ಹೇಳಲಾಗಿದ್ದು, ದರ್ಶನ್ ಅವರ ಬಲಗೈ ಮುರಿತಕ್ಕೊಳಗಾಗಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಕುರಿತು ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲವೆಂದು ಹೇಳಲಾಗಿದ್ದು, ಅಪಘಾತದ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಅಭಿಮಾನಿಗಳು ಆತಂಕಗೊಂಡಿದ್ದು,  ದರ್ಶನ್ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಬಹುದೆಂಬ ಕಾರಣಕ್ಕೆ ಆಸ್ಪತ್ರೆ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿರುವ ಎನ್.ಆರ್. ಠಾಣೆ ಪೊಲೀಸರು ಮಾಹಿತಿ ಕಲೆ ಹಾಕಲು ಮುಂದಾದ ವೇಳೆ, ಇದೊಂದು ಸೆಲ್ಫ್ ಆಕ್ಸಿಡೆಂಡ್ ಆಗಿದ್ದು, ಯಾರಿಗೂ ತೊಂದರೆಯಾಗಿಲ್ಲ. ಹಾಗಾಗಿ ದೂರು ದಾಖಲಿಸುವುದಿಲ್ಲವೆಂದು ಹೇಳಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...