alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದ ಸಂದರ್ಭದಲ್ಲಿ ನಟ ದರ್ಶನ್ ಕಾರಿನಲ್ಲಿದ್ದರು ಮತ್ತಿಬ್ಬರು…!

ಮೈಸೂರಿನ ಹಿನಕಲ್ ಬಳಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್, ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ದರ್ಶನ್ ಅವರ ಸ್ನೇಹಿತ ಅಂತೋನಿ ರಾಯ್ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಈಗಾಗಲೇ ದೇವರಾಜ್, ಪ್ರಜ್ವಲ್ ದೇವರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಲಗೈ ಮೂಳೆ ಮುರಿತಕ್ಕೊಳಗಾಗಿದ್ದ ದರ್ಶನ್, ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದರ ಮಧ್ಯೆ ದರ್ಶನ್ ಅವರ ಗನ್ ಮ್ಯಾನ್, ಅಪಘಾತದ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆ ಪ್ರಕಾರ ಅಂತೋನಿ ರಾಯ್ ಕಾರು ಚಲಾಯಿಸುತ್ತಿದ್ದರೆಂದು ಹೇಳಲಾಗಿದೆ.

ಇದುವರೆಗೂ ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ಅಂತೋನಿ ರಾಯ್ ಇದ್ದರೆಂದು ಭಾವಿಸಿದ್ದರ ಮಧ್ಯೆ ಕೊಲಂಬಿಯಾ ಏಷ್ಯಾ ಆಸ್ಪತ್ರೆ ವೈದ್ಯರ ವರದಿ ಬೇರೆಯದನ್ನೇ ಹೇಳುತ್ತಿದೆ.

ಅಪಘಾತ ನಡೆದ ವೇಳೆ ಕಾರಿನಲ್ಲಿ ಒಟ್ಟು ಆರು ಮಂದಿ ಇದ್ದರೆಂದು ಹೇಳಲಾಗಿದ್ದು, ಕಾರಿನಲ್ಲಿದ್ದ ದರ್ಶನ್ ಆಪ್ತರಾದ ವಿನಯ ಶಂಕರ್ ಮತ್ತು ಪ್ರಕಾಶ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದ ಕಾರಣ ಪ್ರಥಮ ಚಿಕಿತ್ಸೆ ಪಡೆದುಕೊಂಡು ತೆರಳಿದ್ದರೆಂದು ತಿಳಿದು ಬಂದಿದೆ. ಆದರೆ ಇವರಿಬ್ಬರ ಹೆಸರನ್ನು ಇದುವರೆಗೂ ಮುಚ್ಚಿಡಲಾಗಿದ್ದು, ಏಕೆಂಬ ಸಂಗತಿ ಕುತೂಹಲವನ್ನು ಕೆರಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...