alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರೇಕಿಂಗ್ ನ್ಯೂಸ್: ಮೈಸೂರು ಬಳಿ ನಟ ದರ್ಶನ್ ಕಾರು ಅಪಘಾತ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರು ಬಳಿ ಅಪಘಾತಕ್ಕೀಡಾಗಿದ್ದು, ಈ ಅಪಘಾತದಲ್ಲಿ ನಟ ದರ್ಶನ್ ಅವರ ಕೈ ಮುರಿತಕ್ಕೊಳಗಾಗಿದೆ ಎಂದು ತಿಳಿದು ಬಂದಿದೆ.

ಮೈಸೂರಿನ ಹಿನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಟರಾದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರಿಗೂ ಗಾಯಗಳಾಗಿವೆ ಎಂದು ಹೇಳಲಾಗಿದೆ.

ಮೂವರು ನಟರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ‘ಒಡೆಯ’ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಮೈಸೂರಿಗೆ ತೆರಳಿದ್ದರೆಂದು ಹೇಳಲಾಗಿದೆ. ಗಾಯಗೊಂಡ ನಟರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದ ದರ್ಶನ್ ಅವರು, ವಾಪಾಸ್ ಬೆಂಗಳೂರಿಗೆ ಬರುವಾಗ ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಿಯಂತ್ರಣ ತಪ್ಪಿದ ಕಾರು ಹಿನಕಲ್ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ದರ್ಶನ್ ಅವರ ಗೆಳೆಯರೊಬ್ಬರೂ ಸಹ ಗಾಯಗೊಂಡಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...