alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದಲ್ಲಿಯೂ ಶುರುವಾಗಲಿದೆ ‘ಪವರ್ ಸ್ಟಾರ್’ ಪಾಲಿಟಿಕ್ಸ್

ಚಿಕ್ಕಬಳ್ಳಾಪುರ: ಜನಸೇನಾ ಪಕ್ಷದ ಸ್ಥಾಪಕ ಪವರ್ ಸ್ಟಾರ್ ಪವನ್ ಕಲ್ಯಾಣ್ ಇಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳ ನೂಕು ನುಗ್ಗಲು ಉಂಟಾಗಿದೆ.

ಆಂಧ್ರಪ್ರದೇಶದಲ್ಲಿ ಜನಸೇನಾ ಪಕ್ಷದಿಂದ ಯಾತ್ರೆ ಕೈಗೊಂಡಿರುವ ಪವನ್ ಕಲ್ಯಾಣ್ ಮುಂದಿನ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಕರ್ನಾಟಕದಲ್ಲಿಯೂ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪವನ್ ಕಲ್ಯಾಣ್ ಚಿಂತನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನವೀನ್ ಕಿರಣ್ ಅವರು ಜನಸೇನಾ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ಇಂದು ಚಿಕ್ಕಬಳ್ಳಾಪುರದ ಕೆ.ವಿ. ಕ್ಯಾಂಪಸ್ ಭೇಟಿ ನೀಡಿದ ಪವನ್ ಕಲ್ಯಾಣ್ ಅವರಿಗೆ ಅಭಿಮಾನಿಗಳು ಹೂವಿನ ಮಳೆ ಸುರಿಸಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿದ್ದ ಅಭಿಮಾನಿಗಳು ಹೂವಿನ ಮಳೆ ಸುರಿಸಿ ಅದ್ಧೂರಿ ಸ್ವಾಗತ ನೀಡಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ನಡೆಸಿದ ಪೊಲೀಸರು ಕೊನೆಗೆ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಗಡಿಭಾಗದ ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಬಳ್ಳಾರಿ, ಚಳ್ಳಕೆರೆ ಮೊದಲಾದ ಸುಮಾರು 20 ಕ್ಷೇತ್ರಗಳಲ್ಲಿ ಜನಸೇನಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ನಡೆಸಲು ಪವನ್ ಕಲ್ಯಾಣ್ ಮುಂದಾಗಿದ್ದಾರೆ. ಇದರ ಭಾಗವಾಗಿಯೇ ನವೀನ್ ಕಿರಣ್ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...