alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಪರ ಕಿಚ್ಚ, ದರ್ಶನ್ ಭರ್ಜರಿ ಕ್ಯಾಂಪೇನ್

ರಾಜಕೀಯಕ್ಕೆ ಸೇರದಿದ್ದರೂ ವಿವಿಧ ಕಾರಣಗಳಿಂದ ಸ್ಟಾರ್ ನಟರೂ ಕೂಡ ಈ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಈಗಾಗಲೇ ಬಿ.ಜೆ.ಪಿ., ಜೆ.ಡಿ.ಎಸ್. ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದಾರೆ. ಇದರೊಂದಿಗೆ ಮತ್ತಿಬ್ಬರು ಬಿಗ್ ಸ್ಟಾರ್ ಗಳು ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿದ್ಧರಾಮಯ್ಯ ಅವರ ಪರವಾಗಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಲಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ. ಸಿದ್ಧರಾಮಯ್ಯ ಅವರ ಪರವಾಗಿ ನಟ ದರ್ಶನ್ ನಾಳೆ ಪ್ರಚಾರ ನಡೆಸಲಿದ್ದಾರೆ. ಅದಾದ ನಂತರದಲ್ಲಿ ಸುದೀಪ್ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಬಾದಾಮಿಯಲ್ಲಿಯೂ ಸುದೀಪ್ ಸಿ.ಎಂ. ಪರ ಪ್ರಚಾರ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...