alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಸ್ಯನಟನ ಮನೆಯಲ್ಲಿ ಸಂಭ್ರಮ, ಕಾರಣ ಗೊತ್ತಾ..?

ಟಾಲಿವುಡ್ ಜನಪ್ರಿಯ ಹಾಸ್ಯನಟ ಶ್ರೀನಿವಾಸ ರೆಡ್ಡಿ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅವರು 2 ನೇ ಬಾರಿಗೆ ತಂದೆಯಾಗಿದ್ದಾರೆ. ಶ್ರೀನಿವಾಸ ರೆಡ್ಡಿ ಅವರ ಪತ್ನಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ಮನೆಯಲ್ಲಿನ ಸಂಭ್ರಮ ಹೆಚ್ಚಾಗಿದೆ.

ತಮ್ಮ ಸಂತಸವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶ್ರೀನಿವಾಸ ರೆಡ್ಡಿ ಹಂಚಿಕೊಂಡಿದ್ದು, ನಮ್ಮ ಮನೆಗೆ ಪುತ್ರಿಯ ಆಗಮನವಾಗಿದೆ ಎಂದು ಹೇಳಿದ್ದಾರೆ. ಅವರಿಗೆ ಈಗಾಗಲೇ ಶಾಲೆಗೆ ಹೋಗುವ ಮಗಳಿದ್ದಾಳೆ.

ಈ ವರ್ಷ ಶ್ರೀನಿವಾಸ ರೆಡ್ಡಿ ‘ಆನಂದೋ ಬ್ರಹ್ಮ’, ‘ರಾಜ ದಿ ಗ್ರೇಟ್’ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಬಿಡುಗಡೆಗೆ ಸಿದ್ಧವಾಗಿರುವ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಅಜ್ಞಾತವಾಸಿ’ ಚಿತ್ರದಲ್ಲಿ ಅವರು ನಟಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...