alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿಗೆ ಭಯಾನಕ ಅನುಭವ: ಆಯೋಗದಿಂದ ಕ್ರಮ

ನವದೆಹಲಿ: ‘ದಂಗಲ್’ ಖ್ಯಾತಿಯ ನಟಿ ಜೈರಾ ವಾಸಿಮ್ ಅವರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಜೈರಾ ಇನ್ ಸ್ಟಾಗ್ರಾಂ ಲೈವ್ ವಿಡಿಯೋದಲ್ಲಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದು, ಇದು ಗಮನಕ್ಕೆ ಬಂದ ಕೂಡಲೇ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.

ವಿಸ್ತಾರ ಏರ್ ಲೈನ್ಸ್ ಗೆ ನೋಟಿಸ್ ಜಾರಿ ಮಾಡಲಾಗುವುದು. ಮಹಾರಾಷ್ಟ್ರ ಡಿ.ಜಿ.ಪಿ.ಗೆ ಪತ್ರ ಬರೆದು, ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನಕ್ಕೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.

ವಿಸ್ತಾರ ಏರ್ ಲೈನ್ಸ್ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ದೆಹಲಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ನಟಿ ಜೈರಾ ವಾಸಿಮ್ ಗೆ ಕಾಮುಕನೊಬ್ಬ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಇದನ್ನು ನಟಿ ಕಣ್ಣೀರಿಡುತ್ತಾ ಹೇಳಿಕೊಂಡಿದ್ದರು. ಯಾರೂ ಸಹಾಯಕ್ಕೆ ಬರಲಿಲ್ಲ ಎಂದು ಅಳಲು ತೋಡಿಕೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...