alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ‘ದರ್ಶನ’ ಪಡೆದ ಚಾಲೆಂಜಿಂಗ್ ಸ್ಟಾರ್

mysd-dar

ಮೈಸೂರು: ಆಷಾಢ ಶುಕ್ರವಾರದಂದು ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ.

ಆಷಾಢಮಾಸದಲ್ಲಿ ದೇವಿಯ ದರ್ಶನ ಪಡದರೆ ಒಳಿತಾಗುತ್ತದೆ ಎಂಬ ನಂಬಿಕೆ ಇದ್ದು, ಹಿಂದಿನ ವರ್ಷಗಳಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಅಂತೆಯೇ ಕಾಣಿಕೆ ಸಂಗ್ರಹ ಕೂಡ ಹೆಚ್ಚಾಗಿದೆ.

ಆಷಾಢಮಾಸದ 3 ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ದೇವಿಗೆ ವಿಶೇಷ ಅಲಂಕಾರ ಮಾಡಿ, ಪೂಜೆ ನೆರವೇರಿಸಲಾಗಿದೆ.

ಜನಪ್ರತಿನಿಧಿಗಳು, ಗಣ್ಯರು, ಕಲಾವಿದರು ದೇವಿಯ ದರ್ಶನ ಪಡೆದಿದ್ದಾರೆ. ಅಂತೆಯೇ ನಟರಾದ ದರ್ಶನ್, ಸೃಜನ್ ಲೋಕೇಶ್ ಮೊದಲಾದವರು ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಭಾರೀ ಸಂಖ್ಯೆಯಲ್ಲಿ ಭಕ್ತರ ಆಗಮನದ ಹಿನ್ನಲೆಯಲ್ಲಿ ಯಾವುದೇ ತೊಂದರೆಯಾಗದಂತೆ ದೇವಾಲಯ ಆಡಳಿತ ಮಂಡಳಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...