alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದ ಹೆಮ್ಮೆಯ ಮಗನಾದ ದರ್ಶನ್

ದಕ್ಷಿಣ ಭಾರತದ ಚಿತ್ರರಂಗ ಖುಷಿಪಡುವಂತಹ ಸುದ್ದಿ ಬಂದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬ್ರಿಟಿಷ್ ಪಾರ್ಲಿಮೆಂಟ್ ನಿಂದ ವಿಶೇಷ ಗೌರವ ಸಿಗ್ತಿದೆ. ದರ್ಶನ್ ಬ್ರಿಟಿಷ್ ಪಾರ್ಲಿಮೆಂಟ್ ನಿಂದ ಗೌರವಿಸಲ್ಪಡುತ್ತಿರುವ ದಕ್ಷಿಣ ಭಾರತದ ಮೊದಲ ನಟರಾಗಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಗೆ ಬ್ರಿಟಿಷ್ ಪಾರ್ಲಿಮೆಂಟ್ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಈಗ ದರ್ಶನ್ ಸರದಿ. ಬ್ರಿಟಿಷ್ ಪಾರ್ಲಿಮೆಂಟ್ ನಿಂದ ಗೌರವಿಸಲ್ಪಡುತ್ತಿರುವ ಭಾರತದ ಐದನೇ ನಟರಾಗಿದ್ದಾರೆ ದರ್ಶನ್.

ಅಕ್ಟೋಬರ್ 19ಕ್ಕೆ ಗೌರವ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 18ರಂದು ದರ್ಶನ್ ಲಂಡನ್ ಗೆ ತೆರಳಲಿದ್ದಾರೆ ಎನ್ನಲಾಗ್ತಿದೆ. ಕನ್ನಡ ಸಿನಿಮಾ ರಂಗಕ್ಕೆ ದರ್ಶನ್ ಸಲ್ಲಿಸಿದ ವಿಶೇಷ ಸೇವೆಗಾಗಿ ಈ ಪ್ರಶಸ್ತಿ ಲಭಿಸ್ತಿದೆ. ಸದ್ಯ ಬಹುನಿರೀಕ್ಷಿತ ಚಿತ್ರ ಕುರುಕ್ಷೇತ್ರದಲ್ಲಿ ದರ್ಶನ್ ನಟಿಸುತ್ತಿದ್ದಾರೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡಿದೆ. ಡಬ್ಬಿಂಗ್ ರೈಟ್ಸ್ ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆಗಿ ದಾಖಲೆ ಬರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...