alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇಗೆ ಭರ್ಜರಿ ತಯಾರಿ

dar 753

ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಭರ್ಜರಿ ತಯಾರಿ ನಡೆಸಿದ್ದಾರೆ. ದರ್ಶನ್ ಅಭಿನಯದ ‘ವಿರಾಟ್’ ತುಂಬಿದ ಗೃಹಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳ ಉತ್ಸಾಹವನ್ನು ಇಮ್ಮಡಿಗೊಳಿಸಿದೆ.

ದರ್ಶನ್ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಮುಂದಾಗಿರುವ ಅಭಿಮಾನಿಗಳು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ನಿವಾಸದ ಸುತ್ತಮುತ್ತ ಸಂಭ್ರಮಾಚರಣೆ ಜೋರಾಗಿರಲಿದೆ. ಅಭಿಮಾನಿಗಳು ಕಟೌಟ್, ಫ್ಲೆಕ್ಸ್ ಹಾಕಿ ನಟನಿಗೆ ಶುಭಾಶಯ ಹೇಳಲಿದ್ದಾರೆ. 39 ಕೆಜಿ ತೂಕದ ಕೇಕ್ ತಂದು ದರ್ಶನ್ ಅವರಿಂದಲೇ ಕಟ್ ಮಾಡಿಸುವ ಆಸೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಾರೆ.

ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ವಿವಿಧ ಕಡೆಗಳಿಂದಲೂ ಅಭಿಮಾನಿಗಳು ಆಗಮಿಸಲಿದ್ದು, ದರ್ಶನ್ ಅವರು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಯಲ್ಲಿ ಆಚರಿಸಲು ಸಿದ್ಧತೆಯಲ್ಲಿದ್ದಾರೆ. ಕಾಣಲು ಬರುವ ಅಭಿಮಾನಿಗಳ ಜೊತೆಯಲ್ಲಿ ಕಾಲ ಕಳೆಯಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...