alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಪರ ದರ್ಶನ್ ಪ್ರಚಾರ, ಮುಗಿಲುಮುಟ್ಟಿದ ಸಂಭ್ರಮ

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾವುದೇ ರಾಜಕೀಯ ಪಕ್ಷವನ್ನು ಸೇರದಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ಪ್ರಚಾರ ನಡೆಸಿದ್ದ ದರ್ಶನ್, ಇಂದು ನರಸಿಂಹರಾಜ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಸಂದೇಶ್ ಸ್ವಾಮಿ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದಾರೆ.

ಯರಗನಹಳ್ಳಿ ಬಡಾವಣೆಯಿಂದ ರೋಡ್ ಶೋ ನಡೆಸಿದ ದರ್ಶನ್, ಚುನಾವಣೆಯಲ್ಲಿ ಸಂದೇಶ್ ಸ್ವಾಮಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ದರ್ಶನ್ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದ್ದಾರೆ. ಅಲ್ಲದೇ ದರ್ಶನ್ ಅವರನ್ನು ನೋಡಲು ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದೆ. ಅಭಿಮಾನಿಗಳತ್ತ ಕೈ ಬೀಸಿದ ದರ್ಶನ್ ನರಸಿಂಹರಾಜ ಕ್ಷೇತ್ರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...