alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ನಿವಾಸದ ಬಳಿ ಕಿಕ್ಕಿರಿದ ಅಭಿಮಾನಿಗಳು

jaggub

ಸ್ಯಾಂಡಲ್ ವುಡ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರು 39 ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳು, ಹಿತೈಷಿಗಳು ಶುಭ ಕೋರಿದ್ದಾರೆ. ಇದೇ ವೇಳೆ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಜಗ್ಗುದಾದಾ’ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ರಾತ್ರಿಯಿಂದಲೇ ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯ ಬಳಿ ಜಮಾಯಿಸಿದ್ದರು. ಮನೆಗೆ ಬಂದಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳೊಂದಿಗೆ ದರ್ಶನ್ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ರಾಜ್ಯದ ವಿವಿಧ ಕಡೆಗಳಿಂದ ಬಂದಿದ್ದ ಅಭಿಮಾನಿಗಳು ನೆಚ್ಚಿನ ನಟನಿಗೆ ಹಾರ ಹಾಕಿ, ಸಿಹಿ ತಿನ್ನಿಸಿದರಲ್ಲದೇ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ದರ್ಶನ್ ಬರ್ತಡೇ ಪ್ರಯುಕ್ತ ‘ಜಗ್ಗುದಾದಾ’ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ರಾಘವೇಂದ್ರ ಹೆಗಡೆ ಅವರು ನಿರ್ದೇಶನ ಮಾಡಿರುವ ಚಿತ್ರದಲ್ಲಿ ಸೃಜನ್ ಲೋಕೇಶ್, ದೀಕ್ಷಾ, ರಚಿತಾರಾಮ್, ಪ್ರಣಿತಾ, ವಿಶಾಲ್ ಹೆಗ್ಡೆ, ಅಚ್ಯುತರಾವ್ ಮೊದಲಾದವರು ನಟಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...