alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾಮಿಡಿ ಕಿಲಾಡಿ’ ನಯನಾಗೆ ಆಫರ್ ಕೊಟ್ರು ದರ್ಶನ್

ವೀಕ್ಷಕರ ಮನಸೂರೆಗೊಂಡ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ರನ್ನರ್ ಅಪ್ ಆಗಿದ್ದ ನಯನಾ ಅವರಿಗೆ ಸಿನಿಮಾಗಳಲ್ಲಿ ಹೆಚ್ಚಿನ ಅವಕಾಶಗಳು ಸಿಗುತ್ತಿವೆ.

ತಮ್ಮ ಅಭಿನಯದಿಂದಲೇ ಮನೆ ಮಾತಾಗಿರುವ ನಯನಾ ಅಭಿನಯದ ‘ಜಂತರ್ ಮಂತರ್’ ಇತ್ತೀಚೆಗಷ್ಟೇ ತೆರೆ ಕಂಡಿದೆ. ನಿಖಿಲ್ ಕುಮಾರ್ ಅಭಿನಯದ ‘ಸೀತಾರಾಮ ಕಲ್ಯಾಣ’, ವಿನಯ್ ರಾಜ್ ಕುಮಾರ್ ಅಭಿನಯದ ‘ಅನಂತು ವರ್ಸಸ್ ನುಸ್ರತ್’ ಚಿತ್ರದಲ್ಲಿ ಅವರು ಅಭಿನಯಿಸುತ್ತಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರ್ಮಾಣದ ಚಿತ್ರ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿರುವ ನಯನಾ, ಚಾಲೆಂಜಿಂಗ್ ಸ್ಟಾರ್ ದರ್ಶನ್ 51 ನೇ ಚಿತ್ರ ‘ಯಜಮಾನ’ದಲ್ಲಿ ನಟಿಸಲಿದ್ದಾರೆ.

‘ಯಜಮಾನ’ ಚಿತ್ರದಲ್ಲಿ ದರ್ಶನ್, ಧನಂಜಯ್, ರವಿಶಂಕರ್, ರಶ್ಮಿಕಾ ಮಂದಣ್ಣ, ನಯನಾ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ಸಿನಿಮಾ ಕುರಿತಾಗಿ ಕುತೂಹಲ ಹೆಚ್ಚಾಗಿದೆ. ಪಿ. ಕುಮಾರ್ ನಿರ್ದೇಶನ, ಶೈಲಜಾ ನಾಗ್ –ಬಿ. ಸುರೇಶ್ ನಿರ್ಮಾಣದ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...