alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ಸಿನಿಮಾ ಕಾಯುತ್ತಿದ್ದವರಿಗೆ ಖುಷಿ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಚಿತ್ರಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿಸುದ್ದಿ ಇಲ್ಲಿದೆ.

ದರ್ಶನ್ ಅಭಿನಯದ ‘ಕುರುಕ್ಷೇತ್ರ’ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಡಬ್ಬಿಂಗ್ ಕೆಲಸಗಳು ನಡೆದಿವೆ. ಇದೇ ವೇಳೆ ‘ಯಜಮಾನ’ ಚಿತ್ರೀಕರಣ ಕೂಡ ನಡೆಯುತ್ತಿದೆ. ಇದಾದ ಬಳಿಕ ದರ್ಶನ್, ಸಂದೇಶ್ ನಾಗರಾಜ್ ನಿರ್ಮಾಣದ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

ನಂತರದಲ್ಲಿ ಉಮಾಪತಿ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಚಿತ್ರದಲ್ಲಿ ದರ್ಶನ್ ಅಭಿನಯಿಸಲಿದ್ದಾರೆ.

ಮುನಿರತ್ನ ನಿರ್ಮಾಣ, ನಾಗಣ್ಣ ನಿರ್ದೇಶನದಲ್ಲಿ ‘ಕುರುಕ್ಷೇತ್ರ’ ಮೂಡಿ ಬಂದಿದ್ದು, ಚಿತ್ರವನ್ನು ವೀಕ್ಷಿಸಲು ಅಭಿಮಾನಿಗಳು, ಸಿನಿರಸಿಕರು ಕಾತರರಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಶೀಘ್ರವೇ ಚಿತ್ರ ತೆರೆಗೆ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...