alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಚಿತ್ರಕ್ಕೆ ವಿರೋಧ

ಚಾಲೆಂಜಿಂಗ್ ಸ್ಟಾರ್ ದರ್ಶನ್ 50 ನೇ ಚಿತ್ರ ‘ಕುರುಕ್ಷೇತ್ರ’ವನ್ನು ಪೂರ್ಣಗೊಳಿಸಿ, 51 ನೇ ಚಿತ್ರ ‘ಯಜಮಾನ’ದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗಲೇ ಅವರ 52 ನೇ ಚಿತ್ರ ‘ಒಡೆಯರ್’ ಆರಂಭಕ್ಕೆ ಸಿದ್ಧತೆಗಳು ನಡೆದಿವೆ.

ಆದರೆ, ‘ಒಡೆಯರ್’ ಚಿತ್ರಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ, ಎಂ.ಡಿ. ಶ್ರೀಧರ್ ನಿರ್ದೇಶನದಲ್ಲಿ ‘ಒಡೆಯರ್’ ಚಿತ್ರ ಮೂಡಿಬರಲಿದ್ದು, ಇದಕ್ಕೆ ಮೈಸೂರಿನಲ್ಲಿ ಕನ್ನಡ ಕ್ರಾಂತಿ ದಳದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಕನ್ನಡ ನಾಡು, ನುಡಿಗಾಗಿ ಮೈಸೂರು ಒಡೆಯರ ಕೊಡುಗೆ ಅಪಾರವಾಗಿದೆ. ಅವರ ಹೆಸರಲ್ಲಿ ಕಮರ್ಷಿಯಲ್ ಸಿನಿಮಾ ನಿರ್ಮಾಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ‘ಒಡೆಯರ್’ ಟೈಟಲ್ ಬದಲಿಸದೇ ಅದೇ ಹೆಸರಲ್ಲಿ ಚಿತ್ರ ನಿರ್ಮಾಣಕ್ಕೆ ಮುಂದಾದಲ್ಲಿ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...