alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಯ ಈ ಅಭಿಮಾನಕ್ಕೆ ಮನಸೋತ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ಬಿಗ್ ಫ್ಯಾನ್ ಫಾಲೋಯರ್ಸ್ ಹೊಂದಿರುವ ದರ್ಶನ್ ಬಿಡುವಿನ ವೇಳೆಯಲ್ಲಿ ಅಭಿಮಾನಿಗಳೊಂದಿಗೆ ಬೆರೆಯುತ್ತಾರೆ.

ದರ್ಶನ್ ಅವರನ್ನು ಭೇಟಿ ಮಾಡಲು ಅಪಾರ ಅಭಿಮಾನಿಗಳು ಬರುತ್ತಾರೆ. ಅಭಿಮಾನಿಯೊಬ್ಬರು ನೆಚ್ಚಿನ ನಟ ದರ್ಶನ್ ಅವರನ್ನು ಭೇಟಿ ಮಾಡಿ ಮದುವೆಗೆ ಆಹ್ವಾನಿಸಿದ್ದು, ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

ಅಭಿಮಾನಿಗಳಿಂದ ಅಭಿಮಾನದ ಹೊರತಾಗಿ ಕಲಾವಿದರು ಏನನ್ನೂ ನಿರೀಕ್ಷಿಸುವುದಿಲ್ಲ. ಹೀಗಿದ್ದರೂ ಅಭಿಮಾನಿ ಕಿರಣ್ ಅವರ ಅಭಿಮಾನಕ್ಕೆ ಮನಸೋತ ದರ್ಶನ್ ಉಡುಗೊರೆಯನ್ನು ಸ್ವೀಕರಿಸಿದ್ದಾರೆ. ‘ಕುರುಕ್ಷೇತ್ರ’ ಚಿತ್ರದಲ್ಲಿ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಮಿಂಚಿದ್ದು, ಅದೇ ರೀತಿಯ ಫೋಟೋ ಪೇಯಿಂಟ್ ಮಾಡಿಸಿಕೊಂಡು ಬಂದ ಕಿರಣ್, ದರ್ಶನ್ ಅವರಿಗೆ ಕೊಟ್ಟು ಮದುವೆಗೆ ಆಹ್ವಾನಿಸಿದ್ದಾರೆ. ಇದಕ್ಕೆ ದರ್ಶನ್ ಮನಸೋತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...