alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್ ಗೊಂದು ಮಾಹಿತಿ

darshn-fans

‘ಚಕ್ರವರ್ತಿ’ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅಭಿಮಾನಿಗಳಿಗೆ ‘ತಾರಕ್’ ರೆಡಿಯಾಗ್ತಿದೆ.

ಈಗಾಗಲೇ ‘ತಾರಕ್’ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ‘ತಾರಕ್’ ಬಳಿಕ ದರ್ಶನ್ ‘ಕುರುಕ್ಷೇತ್ರ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ‘ಕುರುಕ್ಷೇತ್ರ’ದಲ್ಲಿ ದರ್ಶನ್ ದುರ್ಯೋಧನನ ಪಾತ್ರವನ್ನು ನಿರ್ವಹಿಸಲಿದ್ದಾರೆ. ಇದರೊಂದಿಗೆ ಕರ್ಣನ ಪಾತ್ರದಲ್ಲಿಯೂ ಅವರೇ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ಕುರುಕ್ಷೇತ್ರ’ ಬಳಿಕ ದರ್ಶನ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಸಂದೇಶ್ ನಾಗರಾಜ್ ನಿರ್ಮಾಣ, ಪವನ್ ಒಡೆಯರ್ ನಿರ್ದೇಶನದ ಹೊಸ ಚಿತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಸದ್ಯಕ್ಕೆ ದರ್ಶನ್ ರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ‘ತಾರಕ್’ ಗಾಗಿ ಕಾಯತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...