alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ

dar-fans

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಕುತೂಹಲ ಹೆಚ್ಚಿಸುವ ಸುದ್ದಿ ಇಲ್ಲಿದೆ. ‘ಚಕ್ರವರ್ತಿ’ ಬಳಿಕ ದರ್ಶನ್ ‘ತಾರಕ್’ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ.

‘ಮಿಲನ’ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ತಾರಕ್’ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ವಿದೇಶದಲ್ಲಿ 2 ನೇ ಹಂತದ ಚಿತ್ರೀಕರಣ ನಡೆದಿದೆ.

ಈ ನಡುವೆ ದರ್ಶನ್ ಮುನಿರತ್ನ ನಿರ್ಮಾಣದಲ್ಲಿ ‘ಸಾರಥಿ’ ನಾಗಣ್ಣ ನಿರ್ದೇಶನದಲ್ಲಿ ಹೈ ಬಜೆಟ್ ಸಿನಿಮಾ ‘ಕುರುಕ್ಷೇತ್ರ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕುರುಕ್ಷೇತ್ರದಲ್ಲಿ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಮಿಂಚಲಿದ್ದಾರೆ. ಇದಾದ ಬಳಿಕ ದರ್ಶನ್ ‘ವೀರಂ’ ರಿಮೇಕ್ ನಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಅವರು ‘ವೀರಂ’ ರಿಮೇಕ್ ನಲ್ಲಿ ನಟಿಸುತ್ತಿಲ್ಲ. ಸ್ವಮೇಕ್ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

ತರುಣ್ ಸುಧೀರ್ ನಿರ್ದೇಶನದಲ್ಲಿ ಹಿಂದೆಂದೂ ಕಾಣಿಸಿಕೊಳ್ಳದ ಗೆಟಪ್ ನಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದು, ಚಿತ್ರದ ಟೈಟಲ್, ಕತೆ, ಕಾಸ್ಟ್ಯೂಮ್, ಸಂಭಾಷಣೆ ಎಲ್ಲವೂ ಹೊಸತನದಿಂದ ಕೂಡಿರುತ್ತದೆ. ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...