alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಬಹಿರಂಗವಾಯ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ನೊಂದು ಮುಖ

darsha

ಮೈಸೂರು: ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡದ ಬಹು ಬೇಡಿಕೆ ನಟರಲ್ಲಿ ಒಬ್ಬರು. ಸದ್ಯ ದರ್ಶನ್ ಅಭಿನಯದ ‘ಜಗ್ಗುದಾದಾ’ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಯಶಸ್ವಿ 25 ದಿನ ಪೂರೈಸಿ ಮುನ್ನುಗ್ಗುತ್ತಿದೆ.

ಇದೇ ಸಂದರ್ಭದಲ್ಲಿ ದರ್ಶನ್ ಅವರ ಕುರಿತಾದ ಸುದ್ದಿಯೊಂದು ಇಲ್ಲಿದೆ ನೋಡಿ. ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಅವರು, ಕುದುರೆ, ಹಸು ಅಪರೂಪದ ಪಕ್ಷಿಗಳನ್ನು ತಮ್ಮ ಫಾರ್ಮ್ ಹೌಸ್ ನಲ್ಲಿ ಸಾಕುತ್ತಿದ್ದಾರೆ. ಇದರೊಂದಿಗೆ ಮೃಗಾಲಯದಲ್ಲಿನ ಪ್ರಾಣಿಗಳನ್ನು ಕೂಡ ದತ್ತು ಪಡೆದುಕೊಂಡಿದ್ದರು. ಇದೀಗ, ದರ್ಶನ್ ಮೈಸೂರು ಮೃಗಾಲಯದಲ್ಲಿನ ಆನೆ ಮತ್ತು ಹುಲಿಯನ್ನು ದತ್ತು ಪಡೆದುಕೊಂಡಿದ್ದಾರೆ. 1 ವರ್ಷದ ಅವಧಿಗೆ 2.75 ಲಕ್ಷ ರೂ. ನೀಡಿ ದತ್ತು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ದರ್ಶನ್ ಅವರು ಹಿಂದೆಯೂ ಮೃಗಾಲಯದಲ್ಲಿನ ಪ್ರಾಣಿಗಳನ್ನು ದತ್ತು ಪಡೆದಿದ್ದರು. ಈಗ ಹುಲಿ ಮತ್ತು ಆನೆಯನ್ನು ದತ್ತು ಪಡೆದಿದ್ದು, ಅವರ ಕಾಳಜಿಗೆ ಮೃಗಾಲಯದ ಅಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ. ದರ್ಶನ್ ಅವರ ಬಳಿ ಇರುವ ಅಚ್ಚುಮೆಚ್ಚಿನ ಬಿಳಿ ಕುದುರೆಯನ್ನು ‘ಸಾರಥಿ’, ‘ಸಂಗೊಳ್ಳಿ ರಾಯಣ್ಣ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನೋಡಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...