alex Certify
ಕನ್ನಡ ದುನಿಯಾ       Mobile App
       

Kannada Duniya

ಪುನೀತ್, ದರ್ಶನ್ ಫ್ಯಾನ್ಸ್ ಗೆ ಸಿಹಿ ಸುದ್ದಿ..?

dar-po

ಸ್ಯಾಂಡಲ್ ವುಡ್ ನಲ್ಲಿ ಮಲ್ಟಿ ಸ್ಟಾರ್ ಗಳ ಸಿನಿಮಾ ಕಡಿಮೆ ಎನ್ನುವ ಕಾಲವಿತ್ತು. ಈಗ ಹಾಗೇನಿಲ್ಲ. ಬಿಗ್ ಸ್ಟಾರ್ ಗಳೆಲ್ಲಾ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ದರ್ಶನ್ ಸದ್ಯ ಪ್ರಕಾಶ್ ನಿರ್ದೇಶನದ ‘ತಾರಕ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಹಿಂದೆ ಪುನೀತ್ ಅಭಿನಯದ ‘ಅರಸು’ ಚಿತ್ರದಲ್ಲಿ ದರ್ಶನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುನೀತ್ ಅಭಿನಯದ ‘ಮಿಲನ’ ಚಿತ್ರ ನಿರ್ದೇಶಿದ್ದ ಪ್ರಕಾಶ್ ಅವರು, ‘ತಾರಕ್’ ನಿರ್ದೇಶಿಸಿದ್ದಾರೆ.

ಪುನೀತ್ ‘ತಾರಕ್’ನಲ್ಲಿ ಕಾಣಿಸಿಕೊಂಡರೆ, ಚಾಲೆಂಜಿಂಗ್ ಸ್ಟಾರ್ ಮತ್ತು ಪವರ್ ಸ್ಟಾರ್ ಅಭಿಮಾನಿಗಳಿಗೆ ರಸದೌತಣವಂತೂ ಗ್ಯಾರಂಟಿ.

ಆದರೆ, ಈಗಾಗಲೇ ‘ತಾರಕ್’ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪುನೀತ್ ಕಾಣಿಸಿಕೊಂಡಿಲ್ಲ ಎನ್ನಲಾಗಿದೆ. ಇವರಿಬ್ಬರು ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೇ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸುತ್ತದೆ.

ಮುಂದಿನ ದಿನಗಳಲ್ಲಿ ಪುನೀತ್ ಮತ್ತು ದರ್ಶನ್ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...