alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ಜೊತೆ ಸಿನಿಮಾ, ಸಿಹಿ ಸುದ್ದಿ ನೀಡಿದ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ದರ್ಶನ್ ಅವರೊಂದಿಗೆ ಸಿನಿಮಾ ಮಾಡುವುದಾಗಿ ಸುದೀಪ್ ಹೇಳಿದ್ದಾರೆ.

ದರ್ಶನ್ ಮತ್ತು ಸುದೀಪ್ ಅವರ ನಡುವೆ ಸ್ಟಾರ್ ವಾರ್ ನಡೆಯುತ್ತಿದೆ ಎನ್ನಲಾಗಿದ್ದರೂ, ಇಬ್ಬರೂ ಆತ್ಮೀಯರಾಗಿದ್ದರು. ಆದರೆ, ಇಬ್ಬರೂ ಒಟ್ಟಿಗೆ ಒಂದೇ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ. ಸುದೀಪ್ ಮತ್ತು ದರ್ಶನ್ ಅವರನ್ನು ಒಟ್ಟಿಗೆ ತೆರೆ ಮೇಲೆ ನೋಡಬೇಕೆಂಬುದು ಅಪಾರ ಅಭಿಮಾನಿಗಳ ಬಯಕೆಯಾಗಿದೆ.

ಇದನ್ನೇ ಅಭಿಮಾನಿಯೊಬ್ಬರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ದರ್ಶನ್ ಮತ್ತು ನೀವು ಒಂದೇ ಚಿತ್ರದಲ್ಲಿ ನಟಿಸುತ್ತೀರಾ ಎಂದು ಸುದೀಪ್ ಅವರಿಗೆ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುದೀಪ್, ಖಂಡಿತಾ, ದರ್ಶನ್ ಯಾವಾಗಲೂ ನನ್ನ ಸ್ನೇಹಿತರಾಗಿದ್ದಾರೆ. ನಾವಿಬ್ಬರು ಒಟ್ಟಿಗೆ ನಟಿಸುವಂತಹ ಒಳ್ಳೆಯ ಸ್ಕ್ರಿಪ್ಟ್ ಸಿಕ್ಕರೆ ದರ್ಶನ್ ಅವರೊಂದಿಗೆ ಅಭಿನಯಿಸುತ್ತೇನೆ ಎಂದು ತಿಳಿಸಿದ್ದಾರೆ. ಇದು ಆದಷ್ಟು ಬೇಗ ನಡೆಯಲಿ ಎಂಬುದು ಅಭಿಮಾನಿಗಳ ಬಯಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...