alex Certify
ಕನ್ನಡ ದುನಿಯಾ       Mobile App
       

Kannada Duniya

‘ತಾರಕ್’ ದರ್ಶನ್ ಫ್ಯಾನ್ಸ್ ಗೆ ಸಿಹಿ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ತಾರಕ್’ ಆಡಿಯೋ ಶೀಘ್ರವೇ ರಿಲೀಸ್ ಆಗಲಿದೆ.

ಮುಂದಿನ ತಿಂಗಳು ಚಿತ್ರ ತೆರೆ ಕಾಣಲಿದ್ದು, ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ದರ್ಶನ್, ದೇವರಾಜ್, ಶಾನ್ವಿ ಶ್ರೀವಾಸ್ತವ್, ಶ್ರುತಿ ಹರಿಹರನ್, ಮೊದಲಾದವರು ಅಭಿನಯಿಸಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

ಲಕ್ಷ್ಮಣ್ ದುಷ್ಯಂತ್ ನಿರ್ಮಾಣ ಮಾಡಿರುವ ಚಿತ್ರವನ್ನು ಪ್ರಕಾಶ್ ನಿರ್ದೇಶಿಸಿದ್ದಾರೆ. ಯುರೋಪ್ ಸೇರಿದಂತೆ ಅನೇಕ ದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಪಕ್ಕಾ ಫ್ಯಾಮಿಲಿ ಎಂಟರ್ ಟೈನ್ ಸಿನಿಮಾ ಇದಾಗಿದ್ದು, ದರ್ಶನ್ ವಿಭಿನ್ನ ಪಾತ್ರದಲ್ಲಿ ಸ್ಟೈಲಿಶ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ದರ್ಶನ್ ಅವರ ಅಭಿಮಾನಿಗಳಿಗೆ ರಸದೌತಣ ನೀಡಲಿರುವ ‘ತಾರಕ್’ ದಸರಾ ಸಂಭ್ರಮವನ್ನು ಹೆಚ್ಚಿಸಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...