alex Certify
ಕನ್ನಡ ದುನಿಯಾ       Mobile App
       

Kannada Duniya

‘ತಾರಕ್’ ನೋಡಲು ಮುಗಿಬಿದ್ದ ದರ್ಶನ್ ಫ್ಯಾನ್ಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ‘ತಾರಕ್’ ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಬೆಂಗಳೂರು ಉತ್ತರಹಳ್ಳಿಯ ವೈಭವಿ ಚಿತ್ರಮಂದಿರದಲ್ಲಿ ಬೆಳಿಗ್ಗೆ 6.30 ಕ್ಕೆ ಮೊದಲ ಪ್ರದರ್ಶನ ಆರಂಭವಾಗಿದ್ದು, ಮೊದಲೇ ಟಿಕೆಟ್ ಬುಕ್ ಮಾಡಿದ್ದ ಅಭಿಮಾನಿಗಳು ಬೆಳಗಿನಜಾವವೇ ಥಿಯೇಟರ್ ಗೆ ಆಗಮಿಸಿ, ಸಿನಿಮಾ ನೋಡಿದ್ದಾರೆ.

ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ‘ತಾರಕ್’ ಚಿತ್ರ ಪ್ರದರ್ಶಿಸುವಂತೆ ಒತ್ತಾಯಿಸಿ ದರ್ಶನ್ ಅಭಿಮಾನಿಗಳು ತಡರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದ ಅನೇಕ ಕಡೆಗಳಲ್ಲಿ ಈಗಾಗಲೇ ತಾರಕೋತ್ಸವ ಶುರುವಾಗಿದ್ದು, ದರ್ಶನ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿತ್ರಮಂದಿರಗಳ ಬಳಿ ದರ್ಶನ್ ಕಟೌಟ್ ಗಳಿಗೆ ಹೂವಿನ ಹಾರ ಹಾಕಿದ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...