alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಪತ್ನಿ ದೂರು

dar

ಸ್ಯಾಂಡಲ್ ವುಡ್ ಬಹು ಬೇಡಿಕೆಯ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಾಳಲ್ಲಿ ಮತ್ತೊಮ್ಮೆ ‘ಸುಂಟರಗಾಳಿ’ ಎದ್ದಿದೆ. ತಮ್ಮ ಪತಿ ಮನೆಯ ಬಳಿ ಕುಡಿದು ಬಂದು ಗಲಾಟೆ ಮಾಡಿದ್ದಾರೆ ಎಂದು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದೂರಿದ್ದಾರೆ.

ಕುಡಿದು ಮನೆಯ ಬಳಿ ಬಂದು ಗಲಾಟೆ ಮಾಡಿದ್ದಲ್ಲದೇ, ತಮಗೆ ಪದೇ ಪದೇ ಕಿರುಕುಳ ನೀಡುತ್ತಿರುವ ದರ್ಶನ್ ಅವರನ್ನು ಕರೆಸಿ ಬುದ್ಧಿ ಹೇಳಬೇಕೆಂದು ವಿಜಯಲಕ್ಷ್ಮಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ದೂರು ನೀಡಿ, ದರ್ಶನ್ ಕುಡಿದು ಗಲಾಟೆ ಮಾಡಿದ್ದು, ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಈ ಹಿಂದೆಯೇ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ನಡುವೆ ಮನಸ್ತಾಪ ಉಂಟಾಗಿತ್ತು.

ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಪತ್ನಿ ಆರೋಪಿಸಿ ದೂರು ನೀಡಿದ್ದರಿಂದ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತಿತ್ತು. ಕೊನೆಗೆ ಚಿತ್ರರಂಗದವರು ರಾಜಿ ಪಂಚಾಯಿತಿ ಮಾಡಿ ಸರಿಪಡಿಸಿದ್ದರು. ಬಳಿಕ ಪತ್ನಿ, ಮಗುವಿನೊಂದಿಗೆ ದರ್ಶನ್ ಅನ್ಯೋನ್ಯವಾಗಿದ್ದರು. ದರ್ಶನ್ ಹುಟ್ಟುಹಬ್ಬಕ್ಕೆ ಪತ್ನಿ ಕಾರ್ ಕೂಡ ಕೊಡಿಸಿದ್ದರೆಂದು ಹೇಳಲಾಗಿತ್ತು.

ಆದರೆ, ನಂತರ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ಮಧ್ಯೆ ಮನಸ್ತಾಪ ಉಂಟಾಗಿ ದೂರವಾಗಿದ್ದರು. ಹಿಂದೆಯೇ ದರ್ಶನ್ ಪತ್ನಿಯಿಂದ ದೂರವಾದ ಬಗ್ಗೆ ಮಾತುಗಳು ಕೇಳಿಬಂದಿತ್ತು. ಕಿರುತೆರೆಯ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ದರ್ಶನ್ ಪತ್ನಿ ಭಾಗವಹಿಸದಿದ್ದಾಗ ಇದು ನಿಜ ಎನ್ನಲಾಗಿತ್ತು.

ದರ್ಶನ್ ಅವರಿಂದ ದೂರವಾದ ವಿಜಯಲಕ್ಷ್ಮಿ ಸದ್ಯ ಬೆಂಗಳೂರು ಹೊಸಕೆರೆಹಳ್ಳಿಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದಾರೆ. ಅಲ್ಲಿಗೆ ಬಂದು ದರ್ಶನ್ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡುವುದರೊಂದಿಗೆ ಮತ್ತೊಮ್ಮೆ ದರ್ಶನ್ ಬಾಳಲ್ಲಿ ಬಿರುಗಾಳಿ ಎದ್ದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...