alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ಕುರಿತಾಗಿ ಹೀಗೆಂದ್ರು ‘ಯಜಮಾನ’ ಬೆಡಗಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿಕ್ಕಮಗಳೂರಿನಲ್ಲಿ 2 ನೇ ಹಂತದ ಚಿತ್ರೀಕರಣ ನಡೆಸಲಾಗಿದೆ.

ಶೈಲಜಾ ನಾಗ್ ನಿರ್ಮಾಣದಲ್ಲಿ, ಪೊನ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಯಜಮಾನ’ ಚಿತ್ರದಲ್ಲಿ ದರ್ಶನ್ ಅವರೊಂದಿಗೆ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೊಪೆ ಮೊದಲಾದವರು ಅಭಿನಯಿಸುತ್ತಿದ್ದಾರೆ.

ಚಿತ್ರೀಕರಣದ ವೇಳೆ ತಮಗಾದ ಅನುಭವ ಹಂಚಿಕೊಂಡಿರುವ ತಾನ್ಯಾ ಹೊಪೆ, ದರ್ಶನ್ ಅವರು ಕ್ಯಾಮೆರಾದ ಕುರಿತಾಗಿ ಮಾಹಿತಿ ನೀಡಿದರು. ನಟನೆ ಬಗ್ಗೆ ಸಲಹೆ, ಸೂಚನೆ ನೀಡಿದ್ದಲ್ಲದೇ, ಅಭಿನಯಿಸಲು ನೆರವಾಗಿದ್ದಾರೆ. ಅಭಿನಯಿಸಲು ಅವರು ಸಹಾಯ ಮಾಡಿದ್ದು ಖುಷಿ ತಂದಿದೆ ಎಂದು ತಿಳಿಸಿದ್ದಾರೆ.

ರಶ್ಮಿಕಾ ಮಂದಣ್ಣ ಲವಲವಿಕೆಯಿಂದ, ಉತ್ಸಾಹದಿಂದ ಇರುತ್ತಾರೆ. ಅವರೂ ತಮಗೆ ಸಲಹೆ ನೀಡಿದ್ದಾರೆ ಎಂದು ತಾನ್ಯಾ ಹೇಳಿದ್ದಾರೆ. ‘ಯಜಮಾನ’ ಚಿತ್ರೀಕರಣದ ವೇಳೆ ಚಿತ್ರತಂಡದ ಎಲ್ಲರೂ ಸಹಕಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...