alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ‘ಯಜಮಾನ’ ಚಿತ್ರದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ…?

ಸಾಹಸಸಿಂಹ ವಿಷ್ಣುವರ್ಧನ್ ಅಭಿನಯಿಸಿದ್ದ ಸೂಪರ್ ಹಿಟ್ ಚಿತ್ರ ‘ಯಜಮಾನ’. ಇದೇ ಟೈಟಲ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ದರ್ಶನ್ ಅವರೊಂದಿಗೆ ‘ಯಜಮಾನ’ ಚಿತ್ರದ ವಿಶೇಷ ಸಾಂಗ್ ವೊಂದರಲ್ಲಿ ರೆಬಲ್ ಸ್ಟಾರ್ ಅಂಬರೀಶ್, ಲವ್ಲಿ ಸ್ಟಾರ್ ಪ್ರೇಮ್, ಪ್ರಜ್ವಲ್ ದೇವರಾಜ್, ವಿನೋದ್ ಪ್ರಭಾಕರ್ ಮೊದಲಾದವರು ಹೆಜ್ಜೆ ಹಾಕಿದ್ದಾರೆ.

ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ಹೊಸ ಟ್ರೆಂಡ್ ಶುರುವಾಗಿದೆ. ಬೇರೆ ನಟರ ಚಿತ್ರಗಳ ಸಾಂಗ್ ನಲ್ಲಿ ಸ್ಟಾರ್ ನಟರು ಕಾಣಿಸಿಕೊಳ್ತಿದ್ದಾರೆ. ಇತ್ತೀಚೆಗಷ್ಟೇ ರಿಲೀಸ್ ಆದ ‘ಪ್ರೇಮ ಬರಹ’ ಚಿತ್ರದಲ್ಲಿ ದರ್ಶನ್, ಅರ್ಜುನ್ ಸರ್ಜಾ, ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಹೆಜ್ಜೆ ಹಾಕಿದ್ರು. ಶಿವಣ್ಣ ಅಭಿನಯದ ‘ಭಜರಂಗಿ’, ‘ವಜ್ರಕಾಯ’ ಚಿತ್ರದಲ್ಲಿ ಹಲವು ಸ್ಟಾರ್ ಗಳು ಕಾಣಿಸಿಕೊಂಡಿದ್ರು.

ದರ್ಶನ್ ಅಭಿನಯದ ‘ಯಜಮಾನ’ ಸಾಂಗ್ ನಲ್ಲಿ ಹಲವಾರು ಸ್ಟಾರ್ ಗಳು ತೆರೆ ಹಂಚಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಪಾಂಡವಪುರ ಬಳಿ ಚಿತ್ರೀಕರಣ ನಡೆಯುತ್ತಿದೆ. ಶೈಲಜಾ ನಾಗ್, ಬಿ. ಸುರೇಶ ನಿರ್ಮಾಣದಲ್ಲಿ ಪಿ. ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ದರ್ಶನ್, ರಶ್ಮಿಕಾ ಮಂದಣ್ಣ, ಧನಂಜಯ, ರವಿಶಂಕರ್ ಮೊದಲಾದವರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...