alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮೂವರು ವಿಲನ್ ಗಳು

ಶಿವರಾಜ್ ಕುಮಾರ್ ಅಭಿನಯದ ‘ಟಗರು’ ಚಿತ್ರದ ‘ಡಾಲಿ’ ಪಾತ್ರದ ಮೂಲಕ ಗಮನ ಸೆಳೆದಿರುವ ಧನಂಜಯ ಮತ್ತೊಮ್ಮೆ ಖಳನಾಯಕನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 51 ನೇ ಚಿತ್ರದಲ್ಲಿ ಧನಂಜಯ ಅವರು ವಿಲನ್ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಶೈಲಜಾ ನಾಗ್ ಮತ್ತು ಬಿ. ಸುರೇಶ್ ನಿರ್ಮಾಣದಲ್ಲಿ ಮೂಡಿಬರಲಿರುವ ದರ್ಶನ್ 51 ನೇ ಚಿತ್ರದಲ್ಲಿ ದರ್ಶನ್ ಅವರು ಮೂವರು ವಿಲನ್ ಗಳನ್ನು ಎದುರಿಸಲಿದ್ದಾರೆ. ‘ಆರ್ಮುಗಂ’ ಖ್ಯಾತಿಯ ರವಿಶಂಕರ್, ‘ಡಾಲಿ’ ಖ್ಯಾತಿಯ ಧನಂಜಯ ಹಾಗೂ ಠಾಕೂರ್ ಅನೂಪ್ ಸಿಂಗ್ ವಿಲನ್ ರೋಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಟೈಟಲ್ ಲಾಂಚ್ ಮಾಡಲಿದ್ದು, ಫೆಬ್ರವರಿ 19 ರಿಂದ ಶೂಟಿಂಗ್ ಶುರುವಾಗಲಿದೆ. ಪೊನ್ ಕುಮಾರ್ ನಿರ್ದೇಶನ, ವಿ. ಹರಿಕೃಷ್ಣ, ಶ್ರೀಶ ಕೂದುವಳ್ಳಿ ಛಾಯಾಗ್ರಹಣ ಚಿತ್ರಕ್ಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...