alex Certify
ಕನ್ನಡ ದುನಿಯಾ       Mobile App
       

Kannada Duniya

ದೀಪಾವಳಿಗೆ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್

uppi

ಕನ್ನಡ ಚಿತ್ರ ಪ್ರೇಮಿಗಳಿಗೆ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಾಗಲಿದೆ. ಸ್ಟಾರ್ ನಟರ ಚಿತ್ರಗಳ ಬಿಡುಗಡೆಗೆ ಅಭಿಮಾನಿಗಳು ಕಾತರದಿಂದ ಕಾಯತೊಡಗಿದ್ದಾರೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಇದೇ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘ಮುಕುಂದ ಮುರಾರಿ’ ಅಕ್ಟೋಬರ್ 28 ರಂದು ತೆರೆ ಕಾಣಲಿದೆ. ಅದೇ ದಿನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಬಿಡುಗಡೆಯಾಗಲಿದೆ. ಹೀಗೆ ಸ್ಟಾರ್ ನಟರ ಚಿತ್ರಗಳು ಒಂದೇ ದಿನ ಅದು ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಿಲೀಸ್ ಆಗುತ್ತಿರುವುದು ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ.

ಎಂ.ಎನ್. ಕುಮಾರ್ ನಿರ್ಮಾಣ, ಯಶಸ್ವಿ ನಿರ್ದೇಶಕ ನಂದಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಮುಕುಂದ ಮುರಾರಿ’ ಹಿಂದಿಯ ‘ಓ ಮೈ ಗಾಡ್’ ರಿಮೇಕ್ ಆಗಿದ್ದು, ಉಪೇಂದ್ರ, ಸುದೀಪ್ ಅಭಿಮಾನಿಗಳಿಗೆ ರಸದೌತಣ ನೀಡಲಿದೆ.

ಇನ್ನು ಕೆ. ಮಂಜು ನಿರ್ಮಾಣದಲ್ಲಿ ಮಹೇಶ್ ರಾವ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಯಶ್ ಅಭಿಮಾನಿಗಳ ಸಂಭ್ರಮ ಹೆಚ್ಚು ಮಾಡಿದೆ. ಯಶ್, ರಾಧಿಕಾ ಪಂಡಿತ್ ಮೊದಲಾದವರು ಅಭಿನಯಿಸಿದ್ದಾರೆ.

ಒಂದೇ ದಿನ ಬಿಗ್ ಸ್ಟಾರ್ ಗಳ ಬಿಗ್ ಬಜೆಟ್ ಚಿತ್ರಗಳು ರಿಲೀಸ್ ಆಗುತ್ತಿದ್ದು, ಚಿತ್ರ ಪ್ರೇಮಿಗಳಿಗಂತೂ ದೀಪಾವಳಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...